


 ಬೆಳಗಾವಿ- ಪೀರನವಾಡಿಯಲ್ಲಿ ಕ್ರಾಂತಿವೀರ,ಶೂರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಬಗೆ ಹರಿಸಲು ಜಿಲ್ಲಾಧಿಕಾರಿಗಳು ಮದ್ಯಸ್ಥಿಕೆ ವಹಿಸಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಬೆಳಗಾವಿ- ಪೀರನವಾಡಿಯಲ್ಲಿ ಕ್ರಾಂತಿವೀರ,ಶೂರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಬಗೆ ಹರಿಸಲು ಜಿಲ್ಲಾಧಿಕಾರಿಗಳು ಮದ್ಯಸ್ಥಿಕೆ ವಹಿಸಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಕರವೇ ಜಿಲ್ಲಾದ್ಯಕ್ಷ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕರವೇ ಪದಾಧಿಕಾರಿಗಳು, ಐತಿಹಾಸಿಕ ಬೆಳಗಾವಿ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಬ್ರಿಟಿಷರ ವಿರುದ್ಧ ಹೋರಾಡಿ ಬ್ರಿಟಿಷ್ ಅಧಿಕಾರಿಗಳನ್ನೇ ನಡುಗಿಸಿದ ಕ್ರಾಂತಿವೀರ,ಶೂರ,ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಪೀರನವಾಡಿಯ ಮುಖ್ಯ ಸರ್ಕಲ್ ನಲ್ಲಿ ಪ್ರತಿಷ್ಠಾಪನೆ ಮಾಡುವ ಕುರಿತು ರಾಯಣ್ಣನ ಅಭಿಮಾನಿಗಳು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದಾರೆ.
ಕ್ರಾಂತಿಪುರುಷನ ಪ್ರತಿಮೆಯನ್ನು ಪೀರನವಾಡಿ ಗ್ರಾಮದ ಮುಖ್ಯ ಸರ್ಕಲ್ ನಲ್ಲಿಯೇ ಪ್ರತಿಷ್ಠಾಪನೆ ಮಾಡುವಂತೆ ರಾಜ್ಯಾದ್ಯಂತ ಒತ್ತಾಯ ಮಾಡಲಾಗಿದ್ದು,ಜಿಲ್ಲಾಧಿಕಾರಿಗಳಾದ ತಾವು ಈ ವಿಷಯದಲ್ಲಿ ಕೂಡಲೇ ಮದ್ಯಸ್ಥಿತಿಕೆ ವಹಿಸಬೇಕು,ಈ ಸಮಸ್ಯೆಯನ್ನು ತ್ವರಿತಗತಿಯಲ್ಲಿ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು.
ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪಿಸುವಂತೆ ಬೆಳಗಾವಿಯಲ್ಲಿ ರಾಯಣ್ಣನ ಅಭಿಮಾನಿಗಳು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ತಮಗೆ ಮನವಿ ಅರ್ಪಿಸಿದರೂ ತಾವು ಇದುವರೆಗೆ ಈ ಸಮಸ್ಯೆಗೆ ಸ್ಪಂದಿಸಿಲ್ಲ,ಕ್ರಾಂತಿಪುರುಷನಿಗೆ,ಸಮ್ಮಾನ ನೀಡಬೇಕಾದ ತಾವುಗಳು ಈ ವಿಷಯದಲ್ಲಿ ಮೌನ ವಹಿಸಿರುವದು ನಮಗೆಲ್ಲಾ ಹೋರಾಟಗಾರರಿಗೆ ನೋವಾಗಿದೆ, ಜಿಲ್ಲಾಧಿಕಾರಿಯಾಗಿ,ತಾವೂ ಒಬ್ಬ ರಾಯಣ್ಣನ ಅಭಿಮಾನಿಯಾಗಿ ಪೀರನವಾಡಿಯ ರಾಯಣ್ಣನ ಮೂರ್ತಿ ವಿವಾದ ಬಗೆ ಹರಿಸಲು ತಾವು ಕೂಡಲೇ ಸಮಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಮೂರ್ತಿ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತದೆ.ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡಿದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯವ್ಯಾಪಿ ಹೋರಾಟ ಮಾಡುವದು ಅನಿವಾರ್ಯವಾಗುತ್ತದೆ. ಕರವೇ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					