ಬೆಳಗಾವಿ-ರಾಜಕೀಯ ಒತ್ತಡ,ಗದ್ದಲ ಗಲಾಟೆಯ ನಡುವೆಯೂ ಮುಖ್ಯಮಂತ್ರಿ ಸಿದ್ರಾಮಯ್ಯ ಸೋಮವಾರ ಬೆಳಗಾವಿಗೆ ಆಗಮಿಸಲಿದ್ದಾರೆ.
ಅಗಸ್ಟ್ 26 ಸೋಮವಾರ ದಂದು ಬೆಳಗ್ಗೆ 11-45 ಕ್ಕೆ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸುವ ಅವರು ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಸಾಂಬ್ರಾ ವಿಮಾನ ನಿಲ್ಧಾಣದಿಂದ ರಸ್ತೆಯ ಮೂಲಕ ನೇರವಾಗಿ ಗೋಕಾಕ್ ತಾಲ್ಲೂಕಿನ ಕೌಜಲಗಿ ಗ್ರಾಮಕ್ಕೆ ತೆರಳಿ ಕೌಜಲಗಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಮತ್ತು ಕೋಟೆಯನ್ನು ಉದ್ಘಾಟಿಸಲಿದ್ದಾರೆ.
ಕೌಜಲಗಿ ಕಾರ್ಯಕ್ರಮ ಮುಗಿದ ಬಳಿಕ ಸಿಎಂ ಗೋಕಾಕ್ ತಾಲ್ಲೂಕಿನ ಕಳ್ಳಿಗುದ್ದಿ ಗ್ರಾಮದಲ್ಲಿ ರಾಯಣ್ಣನ ಮೂರ್ತಿ ಉದ್ಘಾಟಿಸಲಿದ್ದಾರೆ.ಈ ಕಾರ್ಯಕ್ರಮ ಮುಗಿದ ಬಳಿಕ ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದಲ್ಲೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಉದ್ಘಾಟಿಸಲಿದ್ದಾರೆ.
ಯಾದವಾಡ ಕಾರ್ಯಕ್ರಮದ ನಂತರ ಮೂಡಲಗಿ ತಾಲ್ಲೂಕಿನ ಕಲ್ಲೊಳ್ಳಿ ಗ್ರಾಮದಲ್ಲಿ ಇತ್ತೀಚಿಗೆ ಉದ್ಘಾಟನೆಗೊಂಡ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲಿದ್ದಾರೆ.
ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಬಳಿಕ ಅಂದು ಸಂಜೆ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿ ಬೆಂಗಳೂರಿಗೆ ತೆರಳಲಿದ್ದಾರೆ.