Breaking News

ನಾಳೆ ಬೆಳಗಾವಿಯಲ್ಲಿ ಗಾಂಜಾವಾಲಾ, ಕೋಕೀಲಾ ಲೈವ್ ರಸಮಂಜರಿ….

ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ

ಬೆಳಗಾವಿ,-: ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ‌ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳನ್ನು‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ರಾಷ್ಟ್ರೀಯ ಖ್ಯಾತಿಯ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಕಿತ್ತೂರು ಉತ್ಸವದ ಹಿಂದಿನ ದಿನವಾದ ಅ.22 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ.

ಅದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕರಾಗಿರುವ ಸಾಧು ಕೋಕಿಲ್ ಅವರು ಮತ್ತು ಜೀ ಕನ್ನಡ ಸರಿಗಮಪ ತಂಡದವರು ನೃತ್ಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ.

ಆಕ್ಸಿಜೆನ್ ಡ್ಯಾನ್ಸ್ ಗ್ರುಪ್ ವತಿಯಿಂದ ನೃತ್ಯ; ರೇಖಾ ಹೆಗಡೆ ಮತ್ತು ತಂಡದವರಿಂದ ನೃತ್ಯ ರೂಪಕ; ಪ್ರಕಾಶ್ ಚಂದನ್ನವರ ತಂಡದಿಂದ ಜೋಗತಿ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಇದಲ್ಲದೇ ಫೈರ್ ಶೋ ಹಾಗೂ ಶಾಡೋ ಆ‌್ಯಕ್ಟ್ ವಿಶೇಷ ಪ್ರದರ್ಶನ ಕೂಡ ಏರ್ಪಡಿಸಲಾಗಿದೆ.
ಎಲ್ಲರಿಗೂ ಉಚಿತ ಪ್ರವೇಶವಿದ್ದು, ಯುವಕ/ಯುವತಿಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮನವಿ ಮಾಡಿಕೊಂಡಿದ್ದಾರೆ.
****

Check Also

ಬೀಯರ್ ಬಾಟಲಿಗಳಿಂದ ಹಲ್ಲೆ, ಬೈಲಹೊಂಗಲದಲ್ಲಿ ಯುವಕನ ಮರ್ಡರ್

ಹಳೇ ವೈಷಮ್ಯದ ಕಾರಣ 13 ಜನ ಸೇರುಕೊಂಡು ಬೀಯರ್ ಬಾಟಲಿ,ಹಾಗೂ ಕುಡುಗೋಲಿನಿಂದ ಯುವಕನ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ …

Leave a Reply

Your email address will not be published. Required fields are marked *