ಬೆಳಗಾವಿ -ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಅವಾಚ್ಯ ಶಬ್ದಗಳ ನಿಂದನೆ ಮಾಡಿರುವ ವಿಚಾರವಾಗಿ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.
ತುಮಕೂರಿನ ಸಮಾಜಿಕ ಜಾಲತಾಣದಲ್ಲಿ ನಿಂದನೆ ಹಿನ್ನೆಲೆಯಲ್ಲಿ ಆರೋಪಿಯನ್ನು ಬೆಳಗಾವಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ಮೋಹಿತ್ ನರಸಿಂಹಮೂರ್ತಿ(38) ಬಂಧನ ಆಗಿದೆ.
ಆರೋಪಿಯನ್ನು ಬೆಳಗಾವಿ ಕೋರ್ಟ್ ಗೆ ಹಾಜರು ಪಡಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ.
ಸತೀಶ್ ಜಾರಕಿಹೊಳಿಗೆ ನಿಂದನೆ ಹಿನ್ನೆಲೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು,
ಸಚಿವರು ಆಪ್ತ ವಿಜಯ ತಳವಾರ್ ಎಂಬುವರಿಂದ ಕೇಸ್ ದಾಖಲು ಮಾಡಿದ ಹಿನ್ನಲೆಯಲ್ಲಿ ಬೆಳಗಾವಿ ಪೋಲೀಸರು ತುಮಕೂರಿನಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.