Breaking News

ವಿಧಾನಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ಪ್ರತಿಧ್ವನಿ

ಬೆಳಗಾವಿ – ವಿಧಾನಸಭೆಯಲ್ಲಿ ಮೊದಲ ದಿನವೇ ಪಂಚಮಸಾಲಿ ಮೀಸಲಾತಿ ಹೋರಾಟ ಪ್ರತಿಧ್ವನಿಸಿತುವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ ಸಭಾದ್ಯಕ್ಷರು ಸುವರ್ಣಸೌಧದಲ್ಲಿ ಅನಾವರಣಗೊಳಿಸಿದ ಅನುಭವ ಮಂಟಪದ ಚಿತ್ರದ ಕುರಿತು ಸದನಕ್ಕೆ ಮಾಹಿತಿ ನೀಡುವಾಗ ಮದ್ಯಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸರ್ಕಾರ ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುತ್ತಿದೆ. ಹೋರಾಟ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದಾಗ ಇದಕ್ಕೆ ಧ್ವನಿಗೂಡಿಸಿದ ಬಸನಗೌಡ ಪಾಟೀಲ ಯತ್ನಾಳ ಸರ್ಕಾರದ ವಿರುದ್ಧ ಕಿಡಿಕಾರಿದರು.

ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಶಾಂತಿಯುತವಾದ ಹೋರಾಟ ನಡೆಯುತ್ತಿದೆ.ಸರ್ಕಾರ ಜಿಲ್ಲಾಧಿಕಾರಿಗಳ ಮೂಲಕ ಟ್ರ್ಯಾಕ್ಟರ್ ಮತ್ತು ಕ್ರೂಜರ್ ವಾಹನಗಳಿಗೆ ನಿರ್ಭಂಧ ಹೇರಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ವಿರೋಧ ಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸಂಧರ್ಭದಲ್ಲಿ ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ವಾಕ್ ಸಮರ ನಡೆಯಿತು ಕೆಲ ಕಾಲ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು ಸಚಿವ ಕೃಷ್ಣ ಭೈರೇಗೌಡ ಮಾತನಾಡಿ ವಿರೋಧ ಪಕ್ಷದವರು ಮೊದಲ ದಿನವೇ ಗದ್ದಲ ಗಲಾಟೆ ಮಾಡಿ ಕಲಾಪದ ಸಮಯವನ್ನು ಹಾಳು ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು

ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಬಸನಗೌಡ ಪಾಟೀಲ ಯತ್ನಾಳ, ಚಂದ್ರಕಾಂತ ಬೆಲ್ಲದ,ಸಿಸಿ ಪಾಟೀಲ,ಅಭಯ ಪಾಟೀಲ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಬಾವಿಗಿಳಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಳಿಕ ಸದನವನ್ನು ಮುಂದೂಡಲಾಯಿತು.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *