ಎಸ್ಎಂ ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಸರ್ಕಾರಿ ರಜೆ ಘೋಷಣೆ, ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಅಂತ್ಯಕ್ರಿಯೆ
ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು.
ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.