ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧಿತರಾಗಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.
ಈ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಬಿಜೆಪಿ ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಸಿ.ಟಿ. ರವಿ ನನ್ನಗೆ ಹೈಕೋರ್ಟ್ ಜಾಮೀನು ನೀಡಿರುವುದು ಸತ್ಯಕ್ಕೆ ಸಿಕ್ಕ ಜಯವಾಗಿದೆ. ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಂಡು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ಕಾನೂನು ಪಾಲಿಸುವ ಪೊಲೀಸರೇ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.
ನಿನ್ನೆ ಅನುಭವಿಸಿದ ಸಂಕಷ್ಟವನ್ನು 35 ವರ್ಷಗಳ ಹಿಂದೆಯೇ ಅನುಭವಿಸಿದ್ದೆ. ಇದೆಲ್ಲಾ ಹೊಸದಲ್ಲಾ. ಇಂತಹ ಸಂಕಷ್ಟದ ಸಂದರ್ಭದಲ್ಲಿ ನನ್ನ ಪರ ನಿಂತ ಪಕ್ಷದ ಶಾಸಕರು, ಸಂಸದರು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
ಇದಕ್ಕೂ ಮುನ್ನಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿ.ಟಿ. ರವಿ. ನನ್ನನ್ನು ರಾತ್ರಿಯಿಡಿ ಟೆರರಿಸ್ಟ್ ರೀತಿ ನೋಡಿದ್ರು. ನಾನು ಖಾನಾಪುರದಲ್ಲಿ ದೂರು ಕೊಟ್ಟರೂ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಳ್ಳಲಿಲ್ಲ. ನಾನು ಸಭಾಪತಿಗಳಿಗೂ ದೂರು ನೀಡಿದ್ದೆ. ಸದನದಲ್ಲಿ ಏನೇ ಆದರೂ ಸಭಾಪತಿಗಳು ನೋಡಿಕೊಳ್ಳುತ್ತಾರೆ. ಆದರೆ ಸುಳ್ಳು ಕೇಸ್ ಹಾಕಿಸಿ ನನ್ನನ್ನು ಬಂಧಿಸಿದ್ದಾರೆ. ಆದರೆ ನನ್ನ ವಿರುದ್ದ ಸಾಕ್ಷ್ಯಾದಾರ ಇಲ್ಲದಿದ್ದರೂ ನನ್ನ ವಿರುದ್ದ ಎಫ್ ಐಆರ್ ಹಾಕಿದ್ದಾರೆ. ನಿನ್ನೆ ಇಡೀ ರಾತ್ರಿ ಸುತ್ತಾಡಿಸುವ ಮೂಲಕ ಮಾನಸಿಕವಾಗಿ ಟಾರ್ಚರ್ ನೀಡಿದ್ದಾರೆ ಎಂದು ಆರೋಪಿಸಿದರು.
ನಾನು ರಾಜಕೀಯ ಸೈದ್ದಾಂತಿಕವಾಗಿ ಟೀಕೆ ಮಾಡುತ್ತೇನೆ. ವೈಯಕ್ತಿಕವಾಗಿ ನಾನು ಟೀಕೆ ಮಾಡಲ್ಲ ನನ್ನ ಬಗ್ಗೆ ಚಿಕ್ಕಮಗಳೂರಿನಲ್ಲಿ ಕೇಳಿ ತಿಳಿದುಕೊಳ್ಳಿ. ಡಿಕೆ ಶಿವಕುಮಾರ್ ಬಗ್ಗೆ ರಾಮನಗರದಲ್ಲಿ ಕೇಳಿ ತಿಳಿದುಕೊಳ್ಳಿ. ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬೆಳಗಾವಿಯಲ್ಲಿ ಕೇಳಿ ತಿಳಿದುಕೊಳ್ಳಿ ಎಂದು ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.