Breaking News

ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ.

*ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ; ಶೇ. 60:40 ಅನುಪಾತಕ್ಕೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ.*

ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ *ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ* ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ.

ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ.

ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ ಜಾರಕಿಹೊಳಿ‌ ಅವರ ಕತೃತ್ವಶಕ್ತಿ ಮತ್ತು ಪೂರಕ ದಾಖಲೆಗಳನ್ನು ಪರಿಶೀಲಿಸಿದ ಕೇಂದ್ರ ಸರ್ಕಾರವು ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ, ಒಟ್ಟು ಅನುದಾನದ ಶೇ. 60ರಷ್ಟು ಹಣಕಾಸಿನ ನೆರವು ನೀಡಲಿದೆ. ಉಳಿದ ಶೇ. 40ರಷ್ಟು ರಾಜ್ಯ ಸರ್ಕಾರದ ಪಾಲಿನ‌ ಅನುದಾನಕ್ಕೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

Check Also

ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್

ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು …

Leave a Reply

Your email address will not be published. Required fields are marked *