Breaking News

ಬೆಳಗಾವಿ ಹೈವೇಯಲ್ಲಿ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣ

ಬೆಳಗಾವಿ: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ತಾಲ್ಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೆಳಗಾವಿ ತಾಲ್ಲೂಕಿನ ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿ ಗಲ್ಲಿಯ ಸಕ್ಷಮ್ ಪಾಟೀಲ್ (20) ಮತ್ತು ಸಿದ್ದಾರ್ಥ ಪಾಟೀಲ್ (23) ಮೃತರು.

ಇಬ್ಬರೂ ಬೈಕ್ ಮೇಲೆ ಕಾಕತಿಯ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ ಹಿಂದಿನಿಂದ ಬಂದ ಅಪರಿಚಿತ ವಾಹನ ಇವರ ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಅಪ್ಪಳಿಸಿದ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವರ್ಕ್ ಫ್ರಾಮ್ ಹೋಮ್….!!!

  ಬೆಳಗಾವಿ- ರಸ್ತೆ ಅಪಘಾತದದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಚವೆ ಲಕ್ಷ್ಮೀ ಹೆಬ್ಬಾಳಕರ್ ತಮ್ಮ …

Leave a Reply

Your email address will not be published. Required fields are marked *