Breaking News

ಬೆಳಗಾವಿಯ ಒಟ್ಟು ನಾಲ್ವರ ದುರ್ಮರಣ, ಸಚಿವರ ಸಂತಾಪ

ಮಹಾಕುಂಭಮೇಳದಲ್ಲಿ ಬೆಳಗಾವಿಯ ನಾಲ್ವರ ದುರ್ಮರಣ: ಸಚಿವ ಸತೀಶ್‌ ಜಾರಕಿಹೊಳಿ ಸಂತಾಪ

ಬೆಳಗಾವಿ: ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ವಡಗಾವಿ ನಿವಾಸಿಗಳಾದ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್, ಶೆಟ್ಟಿಗಲ್ಲಿ ನಿವಾಸಿ ಅರುಣ್ ಕೋಪರ್ಡೆ ಹಾಗೂ ಶಿವಾಜಿ ನಗರದ ಮಾಹಾದೇವಿ ಭವನೂರ ಅವರು ಮೃತಪಟ್ಟಿರುವುದು ತಿಳಿದು ದುಃಖಿತನಾಗಿದ್ದೇನೆ. ಆ ದೇವರು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಹಾಗೆ ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಏಕಾಏಕಿ ಜನಸಂದಣಿ ಹೆಚ್ಚಾದ ಕಾರಣ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ಕಾಲ್ತುಳಿತದಿಂದ ಬೆಳಗಾವಿ ಮೂಲದ ನಾಲ್ವರು ಸಾವಣ್ಣಪ್ಪಿದ್ದಾರೆ. ಅಲ್ಲದೇ ಈ ಮಹಾಕುಂಭಮೇಳದಲ್ಲಿ ಬೆಳಗಾವಿ ಮೂಲದ 30 ಜನರು ಭಾಗವಹಿಸಿದ್ದು, ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರು ಸುರಕ್ಷಿತವಾಗಿ ಮರಳಲಿ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

Check Also

ಇಂದು ಶ್ರೀ ರೇಣುಕಾ ಯಲ್ಲಮ್ಮದೇವಿ ದರ್ಶನ,ನಾಳೆ ಬೆಳಗಾವಿ ದರ್ಶನ….!!!

ಬೆಳಗಾವಿ – ಮಾಜಿ ಸಚಿವ ಹಾಲಿ ವಿಧಾನಪರಿಷತ್ತ್ ಸದಸ್ಯ ಸಿಟಿ ರವಿ ಇಂದು ಸಂಜೆ ಸವದತ್ತಿ ಯಲ್ಲಮ್ಮದೇವಿಯ ದರ್ಶನ ಪಡೆದು …

Leave a Reply

Your email address will not be published. Required fields are marked *