Breaking News
Home / Breaking News / ಜಾರಕಿಹೊಳಿ ಆಪ್ತರ ಮೇಲೆ ಫೈರಿಂಗ್…

ಜಾರಕಿಹೊಳಿ ಆಪ್ತರ ಮೇಲೆ ಫೈರಿಂಗ್…

ಬೆಳಗಾವಿ : ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರಾದ ಕಿರಣ್ ರಜಪೂತ್ ಹಾಗೂ ಭರಮಾ ದೂಪದಾಳೆ ಮೇಲೆ ಫೈರಿಂಗ್ ಮಾಡಲಾಗಿದೆ. ಘಟನೆಯಲ್ಲಿ ಭರಮಾ ದೂಪದಾಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಿರಣ್ ರಜಪೂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು ಸುಮಾರು 7 ಅಡಿ ದೂರದಿಂದ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಭರಮಾ ದೂಪದಾಳೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಂಗ್ರೆಸ್​ ಕಾರ್ಯಕರ್ತ ಕಿರಣ್ ರಜಪೂತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಹಿನ್ನೆಲೆಯಲ್ಲಿ ಫೈರಿಂಗ್ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತನಿಖೆಗೆ ಜಾರಕಿಹೊಳಿ ಒತ್ತಾಯ…

ಹುಕ್ಕೆರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಡೆದಿರುವ ಗುಂಡಿನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಕೊಡಲೇ ತಪಿತಸ್ಥ ಆರೋಪಿಗಳನ್ನು ಬಂಧಿಸಬೇಕೆಂದು ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜು ತಳವಾರಗೆ ರಾಜಕೀಯ ರಕ್ಷಣೆ ಇದೆ. ಅಂಕಲಗಿ ಗ್ರಾಮದಲ್ಲಿ ಮತ್ತೆ ಗುಂಡಾಗಿರಿ ನಡೆದಿದೆ. ಕಳೆದ 6 ತಿಂಗಳಲ್ಲಿ ಮೂರು ಸಲ ಇಂತಹ ಘಟನೆ ನಡೆದಿದೆ. ಇಲ್ಲಿಭಯದ ವಾತಾವರಣ ಮುಂದುವರೆದಿದ್ದು, ಪೊಲೀಸರು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಗಲಾಟೆಯಾದ ಎರಡು ಕುಟುಂಬಗಳು ಸಂಬಂಧಿಕರು ಎಂಬ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೌದು ಇಬ್ಬರು ಸಂಬಂಧಿಕರು ಆದರೆ ಪಕ್ಷ ಬೇರೆ ಬೇರೆ ಇದೆ. ಸಂಧಾನದ ಅವಶ್ಯಕತೆ ಇಲ್ಲ ಕಠಿಣ ಕ್ರಮ ಕೈಗೊಳ್ಳಬೇಕು. ಟೈಗರ್ ಗ್ಯಾಂಗ್ ರೀತಿಯಲ್ಲಿ ಇದನ್ನು ಮಟ್ಟ ಹಾಕಬೇಕು.ದೊಡ್ಡ ಪ್ರಮಾಣದ ಹಣ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.

Check Also

ಮನೆ,ಮನೆಗೆ ಹೋಗಿ ಮತದಾರರ ಚೀಟಿ ವಿತರಿಸಲು ಡಿಸಿ ನಿತೇಶ್ ಪಾಟೀಲ್ ಸೂಚನೆ

ಬೆಳಗಾವಿ, ):ಮತದಾರರಿಗೆ ತಮ್ಮ ಮತಗಟ್ಟೆಗಳ ಬಗ್ಗೆ ಮುಂಚಿತವಾಗಿ ಮತದಾರರ ಚೀಟಿ(ವೋಟರ್ ಸ್ಲಿಪ್)ಗಳನ್ನು ನೀಡಿದರೆ ಮತದಾನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಂದು …

Leave a Reply

Your email address will not be published. Required fields are marked *