ಬೆಳಗಾವಿ-ಮರಾಠಿ ಮಾತನಾಡದ ಬಸ್ ನಿರ್ವಾಹಕನ ಮೇಲೆ ಪುಂಡರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,ಮಾರಿಹಾಳ ಠಾಣೆ ಪೊಲೀಸರು ಓರ್ವ ಅಪ್ರಾಪ್ತ ಸೇರಿ ನಾಲ್ವರು ಆರೋಪಿಗಳು ಬಂಧಿಸಿದ್ದಾರೆ.
ಮಾರುತಿ ತುರುಮುರಿ, ರಾಹುಲ್ ರಾಜು ನಾಯ್ಡು, ಬಾಳು ಗೋಜಗೇಕರ್ ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರೆಲ್ಲರೂ ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಗ್ರಾಮದವರಾಗಿದ್ದಾರೆ.ಕನ್ನಡ ಪರ ಸಂಘಟನೆಗಳ ಸದಸ್ಯರ ಆಕ್ರೋಶದ ಬೆನ್ನಲ್ಲೇ ಆರೋಪಿಗಳು ಅರೆಸ್ಟ್ ಆಗಿದ್ದಾರೆ.
ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಮಾಡಲಾಗಿದೆ.ಮೂವರಿಗೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಮಾಡಲಾಗಿದೆ.ಕೋರ್ಟ್‌ಗೆ ಹಾಜರುಪಡಿಸುವ ಮುನ್ನ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಲಾಗಿದೆ.ಬಳಿಕ ಪುಂಡಾಟ ಮೆರೆದವರನ್ನು ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ.