ಖಾರದಪುಡಿ ಎರಚಿ ಚಿನ್ನ ದೋಚಿದ ಖದೀಮ ಅರೆಸ್ಟ್….

ಮನೆಗೆ ನುಗ್ಗಿ ಒಂಟಿ ಮಹಿಳೆ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನಾಭರಣ ದೋಚಿದ್ದವನ ಬಂಧನ

ಬೆಳಗಾವಿ : ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿ ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನಾಭರಣ ಲೂಟಿ ಮಾಡಿದ್ದ ದರೋಡೆಕೋರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿಯ ಶಾಸ್ತ್ರಿನಗರ ನಿವಾಸಿ ಸ್ವಾಗತ ಢಾಪಳೆಯನ್ನು ಈ ಪ್ರಕರದಲ್ಲಿ ಉದ್ಯಮಭಾಗ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕಳೆದ ಜನವರಿ 27ರಂದು ಬೆಳಗಾವಿಯ ರಾಣಿ ಚನ್ನಮ್ಮ ನಗರದ ಎರಡನೇ ಕ್ರಾಸ್‌ನಲ್ಲಿ ಒಂಟಿ ಮಹಿಳೆ ಇದ್ದ ಮನೆಯೊಂದಕ್ಕೆ ನುಗ್ಗಿದ್ದ ದರೋಡೆಕೋರ ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ 3 ಲಕ್ಷ 50 ಸಾವಿರ ಮೌಲ್ಯದ 52 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದನು.

ಬಂಧಿತ ದರೋಡೆಕೋರನಿಂದ 3 ಲಕ್ಷ 50 ಸಾವಿರ ಮೌಲ್ಯದ 52 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಹೀರೋ ಹೋಂಡಾ ಪ್ಯಾಶನ್ ಪ್ಲಸ್ ಬೈಕ್ ಜಪ್ತಿ ಮಾಡಲಾಗಿದೆ.ಉದ್ಯಮಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *