ಬೆಂಗಳೂರು- ಬೆಳಗಾವಿ ಜಿಲ್ಲೆಯ ಸಮಸ್ಯೆಗಳನ್ನು ಇಂದು ಸಿಎಂ ಸಿದ್ರಾಮಯ್ಯ ಆಲಿಸಿದರು ಬೆಳಗಾವಿ ಜಿಲ್ಲೆಯ ಇಬ್ಬರು ಮಂತ್ರಿಗಳು ಹಾಗೂ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಸಿಎಂ ಗಮನಕ್ಕೆ ತಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಮಹತ್ವದ ಸಭೆ ನಡೆಯಿತು.ಜಿಲ್ಲೆಯ ಶಾಸಕರು ಹಾಗೂ ಸಚಿವರೊಂದಿಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಶಾಸಕರಿಗೆ ನೀಡಲಾಗಿರುವ ವಿವಿಧ ಅನುದಾನದ ಬಳಕೆಯ ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು.
ವೈದ್ಯಕೀಯ, ಶಿಕ್ಷಣ, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ವೇಗವಾಗಿ ಅಭಿವೃದ್ಧಿಪಡಿಸುವುದು, ಬಾಕಿ ಉಳಿದ ಕಾಮಗಾರಿಗಳನ್ನು ಗಡುವಿನೊಳಗೆ ಪೂರ್ಣಗೊಳಿಸುವುದು ಹಾಗೂ ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿ ಅರ್ಹ ಫಲಾನುಭವಿಗೆ ತಲುಪಿಸುವ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟ ಮಾರ್ಗದರ್ಶನ ನೀಡಿದರು.
ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ, ಮಹಾಂತೇಶ ಕೌಜಲಗಿ, ಬಾಬಾಸಾಹೇಬ್ ಪಾಟೀಲ, ಆಸಿಫ್ ಸೇಠ್, ವಿಶ್ವಾಸ್ ವೈದ್ಯ, ಗಣೇಶ ಹುಕ್ಕೇರಿ, ಮಹೇಶ್ ತಮ್ಮಣ್ಣವರ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಾಸಿರ್ ಅಹ್ಮದ್ ಉಪಸ್ಥಿತರಿದ್ದರು.