ಬೆಳಗಾವಿ-ಹೊಟೆಲ್ ನಲ್ಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆಯ ಬರ್ಬರ ಹತ್ಯೆ ಮಾಡಿದ ಘಟನೆ ಮಂಗಳವಾರ ರಾತ್ರಿಬೆಳಗಾವಿಯ ಸದಾಶಿವ ನಗರದ ಲಕ್ಷ್ಮಿ ಕಾಂಪ್ಲೆಕ್ಸ್ ಬಳಿ ನಡೆದಿದೆ.
ಸದಾಶಿವನಗರದ ಮಹಾದೇವಿ ಕಾರೆಣ್ಣವರ್(42) ಕೊಲೆಯಾದ ಮಹಿಳೆ. ಹೊಟೆಲ್ ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಾದೇವಿಯನ್ನು ಹಿಂಬಾಲಿಸಿ ಬಂದಿದ್ದ ದುಷ್ಕರ್ಮಿ ರಾಡ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಡ್ ನಿಂದ ಹೊಡೆಯುತ್ತಿದ್ದಂತೆ ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಪಡೆದ ವಾಪಾಸ್ ಆದರು.ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಶವಾಗಾರಕ್ಕೆ ಮಹಿಳೆ ಶವ ಶಿಪ್ಟ್ ಮಾಡಲಾಗಿದೆ.ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ.