ಬೆಳಗಾವಿ -ಶೀಘ್ರದಲ್ಲೇ ರಾಜ್ಯ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ.ಹುಕ್ಕೇರಿ ಸಾಹುಕಾರ್ ಉಮೇಶ್ ಕತ್ರಿ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಿಂದ ರಾಜಧಾನಿ ಬೆಂಗಳೂರಿಗೆ ಹಾರಿದ್ದಾರೆ.
ಬೆಳಗಾವಿಯಿಂದ ಬೆಂಗಳೂರಿಗೆ ತೆರಳಿದ ಉಮೇಶ ಕತ್ತಿ ಅವರಿಗೆ ಸಿಎಂ ಬುಲಾವ್ ಬಂದಿದ್ದು ಈ ಹಿನ್ನೆಲೆಯಲ್ಲಿ ಉಮೇಶ ಕತ್ತಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಕರೆ ಮಾಡಿ ಬೆಂಗಳೂರಿಗೆ ಬರಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೊರಟ್ಟಿದ್ದೇನೆ. ಸಂಪುಟದಲ್ಲಿ ಅವಕಾಶ ಕೊಡೊದು ಬಿಡೋದು ಸಿಎಂ ಬಿಟ್ಟದ್ದು. ಅವಕಾಶ ಕೊಟ್ಟರೇ ಸಮರ್ಥವಾಗಿ ಕೆಲಸ ಮಾಡುತ್ತೇನೆ.ಎಂದು ಉಮೇಶ್ ಕತ್ತಿ ಹೇಳಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ