ಬೆಳಗಾವಿ
ಕೊನೆಗೂ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ದಾರಿ ಸುಗಮವಾಗಿದೆ. ಈ ಕುರಿತು ಎರಡೂ ಸ್ಥಾನಗಳಿಗೆ ಸರಕಾರ ಮೀಸಲಾತಿ ಪ್ರಕಟಿಸಿದೆ.
ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿಡಲಾಗಿದ್ದು, ಕಳೆದ ಒಂದು ವರ್ಷದಿಂದ ಅಧಿಕಾರ ಇಲ್ಲದೆ ಪರದಾಡುತ್ತಿದ್ದ ಪಾಲಿಕೆ ಸದಸ್ಯರಿಗೆ ಸರಕಾರ ಸಿಹಿ ಸುದ್ದಿ ಕೊಟ್ಟಿದೆ.
ಇನ್ನೂ ಮುಂದೆ ಮೇಯರ್, ಉಪಮೇಯರ್ ಚುನಾವಣೆಯ ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣಾಧಿಕಾರಿಯಾಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದಾರೆ.
ಎರಡೂ ವಾರದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಗೆ ಹೊಸ ಮೇಯರ್ ಮತ್ತು ಉಪಮೇಯರ್ ಆಯ್ಕೆಯಾಗಲಿದ್ದು, ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಮೇಯರ್ ಸ್ಥಾನಕ್ಕಾಗಿ ಲಾಭಿ ಶುರುವಾಗಿದೆ.
ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಇದ್ದು, ಮರಾಠಾ ಸಮುದಾಯದ ಸದಸ್ಯರೊಬ್ಬರು ಪಾಲಿಕೆ ಮೇಯರ್ ಆಗುವ ಸಾಧ್ಯತೆಗಳಿವೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ