ಬೆಳಗಾವಿ-ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಗೆ ಗೋಕಾಕ್ ತಾಲ್ಲೂಕಿನಲ್ಲಿ ಯುವಕ ಕೊಚ್ವಿಹೋದ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲೆಯಲ್ಲಿ ಮಹಾಮಳೆಗೆ ಮಹಿಳೆಯೊಬ್ಬಳು ಬಲಿಯಾಗಿದ್ದಾಳೆ.
ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವನ್ನೊಪ್ಪಿದ ಘಟನೆ ನಡೆದಿದೆ.ಹೂಲಿಕಟ್ಟಿ ಗ್ರಾಮದ ಗಂಗವ್ವ ರಾಮಣ್ಣ ಮೂಲಿಮನಿ (55) ಮೃತ ಮಹಿಳೆಯಾಗಿದ್ದಾಳೆ.
ಬೆಳಗಾವಿ ನಗರ ಸೇರಿ ಜಿಲ್ಲೆಯ ವಿವಿಧೆಡೆ ವರುಣನ ಆರ್ಭಟ ಮುಂದುವರೆದಿದೆ.ಹೂಲಿಕಟ್ಟಿ ಗ್ರಾಮದಲ್ಲಿ ಮಳೆ ಅಬ್ಬರಕ್ಕೆ ಮನೆ ಗೋಡೆ ಕುಸಿದು,ಇಂದು ಬೆಳಗ್ಗೆ 4 ಗಂಟೆಗೆ ಮನೆ ಗೋಡೆ ಕುಸಿದು ಮಹಿಳೆಗೆ ಗಂಭೀರ ಗಾಯಗಳಾಗಿದ್ದವು,ಸ್ಥಳೀಯರ ನೆರವು ಪಡೆದು ತಕ್ಷಣವೇ ಗಂಗವ್ವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೇ ಗಂಗವ್ವ ರಾಮಣ್ಣ ಮೂಲಿಮನಿ (55) ಮೃತಪಟ್ಟಿದ್ದಾಳೆ.ಗ್ರಾಮಕ್ಕೆ ಹಿರಿಯ ಅಧಿಕಾರಿಗಳ ಭೇಟಿ ನೀಡಿದ್ದು ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ