Breaking News
Home / Breaking News / ಅಪಘಾತ..ಅಪಘಾತ..ಅಪಘಾತ…ಆಘಾತ..ಆಘಾತ…!!

ಅಪಘಾತ..ಅಪಘಾತ..ಅಪಘಾತ…ಆಘಾತ..ಆಘಾತ…!!

ಹುಕ್ಕೇರಿ: ಸಮೀಪದ ಹೊಳೆಮ್ಮನ ಗುಡಿ ಹಳ್ಳದ ಹತ್ತಿರ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಬೈಕ್‌ ಮೇಲೆ ಹೊರಟಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ (22) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತಪಟ್ಟವರು.

ಭಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವ ಆಗಿದ್ದರಿಂದ ಅವರು ಬದುಕುಳಿಯಲಿಲ್ಲ.

ಇಬ್ಬರೂ ಸ್ನೇಹಿತರು ಕೂಡಿಕೊಂಡು ಬೈಕ್‌ ಮೇಲೆ ಸೋಮವಾರ ಬೆಳಿಗ್ಗೆ ಹುಕ್ಕೇರಿ ತಾಲ್ಲೂಕಿನ ಕರೋಶಿಯ ದೇವಸ್ಥಾನಕ್ಕೆ ಹೋಗಿದ್ದರು. ಮಹಾನವಮಿ ಅಂಗವಾಗಿ ಕರೋಶಿಯ ತಮ್ಮ ಮನೆದೇವರಿಗೆ ದೀಪ ಹಚ್ಚಲು ಹೋಗಿದ್ದರು. ಅಲ್ಲಿಂದ ಮರಳಿ ಬರುವಾಗ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

Check Also

ಸಂಜಯ ಪಾಟೀಲ ವಿರುದ್ಧ ದೂರು ದಾಖಲು…

ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Leave a Reply

Your email address will not be published. Required fields are marked *