ಚಿಕ್ಕೋಡಿ: ಪಕ್ಕದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ್ ತಾಲೂಕಿನ ಬಿಳ್ಳೂರ ಗ್ರಾಮದ ಹೊರವಲಯದಲ್ಲಿ ತಾಯಿ ಜೊತೆ ಮೂರು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸುನೀತಾ ತುಕಾರಾಮ ಮಾಳಿ (27) ಅಮೃತಾ ತುಕಾರಾಮ ಮಾಳಿ (13)ಅಂಕಿತಾ ತುಕಾರಾಮ ಮಾಳಿ (10) ಐಶ್ವರ್ಯ ತುಕಾರಾಮ ಮಾಳಿ (7) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನದ ಹಿಂದೆ ನಾಪತ್ತೆಯಾಗಿದ್ದಾರೆ ಎಂದು ಕುಟುಂಬಸ್ಥರು ಜತ್ತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಕಳೆದ ಸೋಮವಾರ ದಿನದಂದು ಬಿಳ್ಳೂರ ಗ್ರಾಮದ ಹೊರವಲಯದ ಕೆರೆಯಲ್ಲಿ ನಾಲ್ಕು ಜನರ ಮೃತ ದೇಹಗಳು ತೇಲುತ್ತಿದ್ದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ಹೊರಬರಬೇಕು.
ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ ಸುನೀತಾ ತುಕಾರಾಮ ಮಾಳಿ (27) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ನಿವಾಸಿ, ಕಳೆದ 14 ವರ್ಷದ ಹಿಂದೆ ಪಕ್ಕದ ಮಹಾರಾಷ್ಟ್ರ ರಾಜ್ಯದ ಬಿಳ್ಳೂರ ಗ್ರಾಮದ ತುಕಾರಾಮ ಮಾಳಿ ಎಂಬುವರ ಜೊತೆ ವಿವಾಹ ನಡೆದಿತ್ತು. ಆದರೆ ತುಕಾರಾಮ ದಿನಂಪ್ರತಿ ಮದ್ಯ ಸೇವನೆಯಿಂದ ಮನೆಯಲ್ಲಿ ಕಿರುಕುಳ ನಡೆಯುತಿತ್ತು ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹದಿಂದ ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಹಾರಾಷ್ಟ್ರ ಜತ್ತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ