ಬೆಳಗಾವಿಯ ಕಾಲೇಜಿನಲ್ಲಿ ಕನ್ನಡದ ಧ್ವಜ ಹಿಡಿದ ವಿಧ್ಯಾರ್ಥಿಗೆ ಥಳಿತ..!!

ಬೆಳಗಾವಿ-ಬೆಳಗಾವಿಯಲ್ಲಿ ಭಾಷಾ ದ್ವೇಷ ಕಾಲೇಜಿಗೂ ಕಾಲಿಟ್ಟಿದೆ.ಕಾಲೇಜಿನ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿಗೆ ಥಳಿಸಿದ ಘಟನೆಯೂ ಇಲ್ಲಿ ನಡೆದಿದೆ.

ಬೆಳಗಾವಿಯ ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದ ಘಟನೆಯ ದೃಶ್ಯವೈರಲ್ಆಗಿದೆ.ಬೆಳಗಾವಿನಗರದಟೀಳಕವಾಡಿಯಲ್ಲಿರುವ ಕಾಲೇಜಿನಲ್ಲಿ ಈ ಘಟನೆ ನಡೆದಿದೆಕಾಲೇಜಿನ ಫೆರವಲ್ ಡೇ ಆಚರಣೆ ವೇಳೆ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದಕ್ಕೆ ಕನ್ನಡದ ವಿಧ್ಯಾರ್ಥಿಯ ಮೇಲೆ ಹಲ್ಲೆ ಮಾಡಲಾಗಿದೆ.ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಸಹಪಾಠಿಗಳು ಥಳಿಸಿದ್ದಾರೆ.ಬೆಳಗಾವಿ ಟೀಳಕವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಥಳಿತಕ್ಕೆ ಒಳಗಾದ ವಿದ್ಯಾರ್ಥಿಯಿಂದ ದೂರು ದಾಖಲಿಸಿಲ್ಲ.ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಗರದ ಟಿಳಕವಾಡಿಯಲ್ಲಿರುವ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಕನ್ನಡ‌ಮತ್ತು‌ಮರಾಠಿ ‌ಭಾಷಿಕ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ.
ಬುಧವಾರ ಕಾಲೇಜಿನ ಆವರಣದಲ್ಲಿ ಜರುಗಿದ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಹಾಡಿಗೆ ನೃತ್ಯ ಮಾಡುತ್ತಿರುವುದಕ್ಕೆ ಮರಾಠಿ ಭಾಷಿಕ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಎರಡು ಭಾಷಿಕ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿ ಕೊಂಡಿದ್ದಾರೆ. ತಕ್ಷಣವೇ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮಧ್ಯಪ್ರವೇಶಿಸಿ ಸಮಸ್ಯೆ ಇತ್ಯರ್ಥ ಪಡಿಸಿದ್ದಾರೆ. ಈ ಕುರಿತು ಟಿಳಕವಾಡಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

ನಗರದ ಖಾಸಗಿ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡಿನ ವಿಷಯವಾಗಿ ಎರಡು ಭಾಷಿಕ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿರುವುದು ನಿಜ. ಆದರೆ, ಕಾಲೇಜಿನ ಆಡಳಿತ ಮಂಡಳಿ ಸಮಸ್ಯೆ ಇತ್ಯರ್ಥ ಪಡಿಸಿರುವುದಾಗಿ ತಿಳಿಸಿದ್ದಾರೆ. ಕಾಲೇಜಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆ ಮಾಡಲಾಗಿದೆ ಎಂದು ಡಿಸಿಪಿ ರವೀಂದ್ರ ಗಡಾದೆ ಹೇಳಿದ್ದಾರೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *