ಬೆಳಗಾವಿ ಜಿಲ್ಲೆಯ 10 ಕೃಷಿ ಉತ್ಪನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು ಜಿಲ್ಲಾಢಳಿತ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ.
ಬೆಳಗಾವಿ ಜಿಲ್ಲೆಯ 10 ಕೃಷಿ ಉತ್ಪನ ಮಾರುಕಟ್ಟೆ ಸಮಿತಿಗಳಿದ್ದು 133 ಕ್ಷೇತ್ರಗಳು ಇವೆ. ಈ ಪೈಕಿ ಈಗಾಗಲೇ 28 ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ನಡೆದಿದ್ದು, ಇನ್ನೂಳಿದ 105 ಕ್ಷೇತ್ರಗಳಿಗೆ ನಾಳೆ ಮತದಾನ ಪ್ರಕ್ರಿಯೆ ನಡೆಯಲಿದೆ. ಮತದಾನ ಪ್ರಕ್ರಿಯೆಗಾಗಿ 1561 ಮತಗಟ್ಟೆ ಸ್ಥಾಪನ ಮಾಡಲಾಗಿದ್ದು, ಜಿಲ್ಲೆಯ 10.72 ಲಕ್ಷ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ.
ನಾಳೆ ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, 314 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ. ಚುನಾವಣೆ ಮತದಾನಕ್ಕೆ ಪ್ರಕ್ರಿಯೆಗಾಗಿ 6870 ಸಿಬ್ಬಂಧಿಯನ್ನು ನಿಯೋಜನೆ ಮಾಡಲಾಗಿದೆ. ಇನ್ನೂ ಮರು ಮತದಾನಕ್ಕೆ ಅವಶ್ಯ ಬಿದ್ದಲ್ಲಿ 13ಕ್ಕೆ ಮರು ಮತದಾನ ಪ್ರಕ್ರಿಯೆ ನಡೆಯಲಿದೆ. ಮತಗಟ್ಟೆಯ ಸುತ್ತಮುತ್ತ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಮಾಡಲಾಗಿದ್ದು, ಜಿಲ್ಲೆಯಲ್ಲಿ ಮದ್ಯ ಮರಾಟ ನಿಷೇಧಿಸಲಾಗಿದೆ. ಜತೆಗೆ ಇದೇ 14ರಂದು ಬೆಳಗಾವಿಯ 10 ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಢಳಿತ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ.
ಮತಗಟ್ಟೆಯಲ್ಲಿ ಭದ್ರತೆಗಾಗಿ 11 ಡಿಎಸ್ಪಿ ಗಳ ನೇತೃತ್ವದಲ್ಲಿ 1300 ಜನ ಪೊಲೀಸ್ ಸಿಬ್ಬಂಧಿ ಹಾಗೂ 700 ಜನ ಹೋಂ ಗಾರ್ಡ್ ಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ನೋಟಾ ಚಲಾವಣೆಗೆ ಅವಕಾಶ ಕಲ್ಪಿಸಿಲ್ಲ, ಜಿಲ್ಲೆಯಲ್ಲಿ ಶಾಂತ ರೀತಿಯಲ್ಲಿ ಚುನಾವಣೆ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎನ್ನುತ್ತಾರೆ ಬೆಳಗಾವಿ ಜಿಲ್ಲಾಧಿಕಾರಿ ಎನ್. ಜಯರಾಂ.