ಬೆಳಗಾವಿ-ವಿಧಾನಸಭೆ ಚುನಾವಣೆಗೆ ಬೆಳಗಾವಿ ಜಿಲ್ಲೆಯಲ್ಲಿ ಅಖಾಡಾ ರೆಡಿಯಾಗುತ್ತಿದೆ.ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಹಾಕುವ ಪ್ರಕ್ರಿಯೆ ಜೋರಾಗಿಯೇ ನಡೆದಿದೆ.
ಬೆಳಗಾವಿ ಉತ್ತರ ಕ್ಷೇತ್ರದಿಂದ ಈಗಾಗಲೇ ಎಂಟು ಜನ ಅರ್ಜಿ ಹಾಕಿದ್ದಾರೆ. ಇನ್ನೂ ಹಲವಾರು ಜನ ಅರ್ಜಿ ಹಾಕಲು ತಯಾರಿ ನಡೆಸಿದ್ದಾರೆ. ಆದ್ರೆ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಕೈ ಪಾಳೆಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆದಿವೆ ರಮೇಶ್ ಕುಡಚಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಲಾಗುತ್ತದ್ದರೂ ರಮೇಶ್ ಕುಡಚಿ ಹೊರತು ಪಡಿಸಿ ಬೇರೆ ಇಬ್ಬರು ಆಕಾಂಕ್ಷಿಗಳು ಕೈ ಟಿಕೆಟ್ ಗಾಗಿ ಅರ್ಜಿ ಹಾಕಿ ಅಚ್ಚರಿ ಮೂಡಿಸಿದ್ದಾರೆ.
ಬೆಳಗಾವಿ ದಕ್ಷಿಣ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಪ್ರಭಾವತಿ ಚಾವಡಿ,ಮತ್ತು ಮಾಜಿ ಜಿಪಂ ಸದಸ್ಯ ರಮೇಶ್ ಗೋರಲ್ ಅರ್ಜಿ ಹಾಕಿದ್ದಾರೆ. ಆದ್ರೆ ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ನಿಗೂಡ ನಡೆ ಅನುಸರಿಸುತ್ತಿದೆ.ಕೊನೆಯ ಕ್ಷಣದವರೆಗೂ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ನಡೆಸಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ