Breaking News

ಪಂಚಾಯತಿ ಚುನಾವಣೆಗೆ ಬಿಜೆಪಿ ತಯಾರಿ

ಬೆಳಗಾವಿಬರುವ ಸ್ಥಳೀಯ ಮಟ್ಟದ ಚುನಾವಣೆ ಬಿಜೆಪಿಗೆ ಮಹತ್ವವಾಗಿದೆ. ಎಲ್ಲ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕಿದೆ, ಕೇಂದ್ರ ಸರಕಾರದ ಮಹತ್ತರ ಯೋಜನೆಯನ್ನು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.

ಸೋಮವಾರ ನಗರದ ಧರ್ಮನಾಥ ಭವನದಲ್ಲಿ ಬೆಳಗಾವಿ ಗ್ರಾಮಾಂತರ, ಮಹಾನಗರ ಮತ್ತು ಚಿಕ್ಕೋಡಿ ಜಿಲ್ಲೆಯ ಪ್ರಮುಖರ ಪ್ರಶಿಕ್ಷಣ ವರ್ಗದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

2014ರ ಬಳಿಕ ನಮ್ಮ ಸರಕಾರದ ಅವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಾಕಷ್ಟು ಯೋಜನೆಯನ್ನು ನೀಡಿದ್ದಾರೆ. ಆ ಯೋಜನೆಯನ್ನು ಪಟ್ಟಿ ಮಾಡಿ ರೈತರಿಗೆ, ಮಹಿಳೆಯರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಯಾವೇಲ್ಲ ಯೋಜನೆ ಬಂದಿವೆ ಎನ್ನುವುದನ್ನು ಮೊದಲು ಕಾರ್ಯಕರ್ತರು ತಿಳಿದುಕೊಂಡು ಜನರಿಗೆ ತಿಳಿಸಬೇಕಿದೆ ಎಂದರು.

ಭೂಸೂಧಾರಣೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿಯನ್ನು ವಿರೋಧಿಸಿ ಕಾಂಗ್ರೆಸ್ ರೈತರ ಹಾಗೂ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಈ ಕಾಯ್ದೆಯ ಬಗ್ಗೆ ಈಗಾಗಲೇ ರಾಜ್ಯ ಸರಕಾರ ಸದನದಲ್ಲಿ ಅಂಗೀಕಾರ ಮಾಡಿದೆ. ಜನರಿಗೆ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿರುವ ಕಾಂಗ್ರೆಸ್ ನಡುವಳಿಕೆಯ ಬಗ್ಗೆ ಲಕ್ಷಾಂತರ ಕರ ಪತ್ರ ಹಂಚಿ ಜನರಿಗೆ ಮನವರಿಕೆ ಮಾಡಿಕೊಡುತ್ತ ಸಾಗಿದೆ ಎಂದರು.

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೇಂದ್ರ ಸರಕಾರದ ಯೋಜನೆ ತಲುಪಬೇಕು. ಆತ್ಮ ನಿರ್ಭರ ಭಾರತವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆ 20 ಲಕ್ಷ ಕೋಟಿ‌ ರು. ವಿಶೇಷ ಅನುದಾನ ನೀಡಿದೆ. ಅದನ್ನು ಸದುಪಯೋಗ ಪಡೆದುಕೊಳ್ಳಲು ಜನರಿಗೆ ಮನವರಿಕೆ ಮಾಡಿಕೊಡಬೇಕೆಂದು ಹೇಳಿದರು.

ವ್ಯಕ್ತಿತ್ವ ವಿಕಸನ, ಸಾಮಾಜಿಕ ಜಾಲತಾಣದ ಸದುಪಯೋಗ ಪಡೆದುಕೊಳ್ಳವ ಅಗತ್ಯವಿದೆ. ರಾಜ್ಯ ಮತ್ತು ಕೇಂದ್ರ ಸರಕಾರ ಇದೆ. ಮೊದಲು ಬಿಜೆಪಿ ಸರಕಾರ ಎಂದರೆ ಬೇರೆ ರೀತಿಯಲ್ಲಿ ನೋಡುತ್ತಿದ್ದರು. ಸದ್ಯ‌ ರತ್ನಗಂಬಳಿ ಹಾಕಿ ಕರೆಯುತ್ತಿದ್ದಾರೆ. ಕಾರ್ಯಕರ್ತರು ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಶಾಸಕ ಅನಿಲ್ ಬೆನಕೆ ಮಾತನಾಡಿ, ಮೊದಲು ಬಿಜೆಪಿ ಪಕ್ಷ ಎಂದರೆ ಕಲ್ಲು ಹೊಡೆಯುತ್ತಿದ್ದರು. ಕಾರ್ಯಕರ್ತರು ಸೇರಿಕೊಂಡು ಪೆಟ್ರೋಲ್ ಹಾಕಿ ಸುರಕ್ಷಿತವಾಗಿ ಕಳುಹಿಸಿದ್ದರು. ಸದ್ಯ ಪರಿಸ್ಥಿತಿ ಸಾಕಷ್ಟು ಬದಲಾವಣೆಯಾಗಿದೆ. ಕೇಂದ್ರ ಸರಕಾರ ನರೇಂದ್ರ ‌ಮೋದಿ ನೇತೃತ್ವದಲ್ಲಿ ಸುಭದ್ರವಾಗಿದೆ ಎಂದರು.

ಪಾಕಿಸ್ತಾನದಲ್ಲಿರುವವರು ಭಾರತದ ವಿರುದ್ದ ಮಾತನಾಡಲು ಭಯ ಪಡುತ್ತಿದ್ದಾರೆ. ಇದು ಸುವರ್ಣ ಕಾಲದಲ್ಲಿದ್ದೇವೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದಿದೆ ಎಂದರೆ ಸುದೈವ. ಎಂದಿಗೂ ಕೇಂದ್ರದಲ್ಲಿ ಒಂದು ಪಕ್ಷ ಇದ್ದರೆ ರಾಜ್ಯದಲ್ಲಿ ಬೇರೆ ಸರಕಾರ ಇರುತ್ತಿತ್ತು ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯನ್ನು ಕಾರ್ಯಕರ್ತರು ಬಡ ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಶಾಸಕ ಅಭಯ ಪಾಟೀಲ ಮಾತನಾಡಿ, ಪಕ್ಷ ಸಂಘಟನೆ ಮಾಡುವ ಕಾರ್ಯಕರ್ತರಿಗೆ ಯಾವುದೇ ಸ್ಥಾನ ಮಾನಕ್ಕಾಗಿ ಕೆಲಸ ಮಾಡಬೇಡಿ. ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷ ಎಂದಿಗೂ ಕೈ ಬಿಡುವುದಿಲ್ಲ. ಎಲ್ಲ ಸ್ವಭಾವನ್ನು ಮೆಟ್ಟಿನಿಂತು ಕೆಲಸ ಮಾಡಬೇಕು. ಅಧಿಕಾರಕ್ಕಾಗಿ ಕೆಲಸ ಮಾಡಬೇಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕೋವಿಡ್-19 ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಿಟ್ಟು ಯಾವ ಪಕ್ಷದವರು ಬಂದು ಕೆಲಸ ಮಾಡಿಲ್ಲ. ನಾವು ಆದರ್ಶವನ್ನು ಇಟ್ಟುಕೊಂಡು ಕೆಲಸ ಮಾಡಬೇಕೆಂದು ಹೇಳಿದರು.

ಬಿಜೆಪಿ ಮಹಾನಗರದ ಅಧ್ಯಕ್ಷ ಶಶಿ ಪಾಟೀಲ, ಚಂದ್ರಕಾಂತ ಕವಟಗಿ, ರಾಜೇಶ ನೀರಲಿ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *