ಬೆಳಗಾವಿ- ಇಂದು ಶನಿವಾರ ಗಡಿನಾಡ ಗುಡಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ.ಗೋ ಹತ್ಯೆ ಸಂಪೂರ್ಣವಾಗಿ ನಿಷೇಧಿಸಲು ಪ್ರಬಲ ಕಾನೂನು ರಚನೆಗೆ ಒತ್ತಾಯ ಮಾಡುವದು,ಲವ್ ಜಿಹಾದ್ ಗೆ ಕಡಿವಾಣ ಹಾಕಲು ಕಾನೂನು ರಚಿಸುವದೇ ಬಿಜೆಪಿ ಕಾರ್ಯಕಾರಿಣಿಯ ಮುಖ್ಯ ಅಜೇಂಡಾ ಆಗಲಿದೆ.
ಗೋ ಹತ್ಯೆ ನಿಷೇಧಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎನ್ನುವ ಆಕ್ರೋಶ ಸಾಮಾಜಿಕ ಜಾಲತಾಣಗಳಲ್ಲಿ ವ್ಯೆಕ್ತವಾಗುತ್ತಿರುವ ಹಿನ್ನಲೆಯಲ್ಲಿ, ಇದೇ ವಿಷಯ ಟೀಕೆಗೆ ಗುರಿಯಾಗುತ್ತಿರುವದನ್ನು ತಪ್ಪಿಸಲು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ವ್ಯಾಪಕ ಚರ್ಚೆ ನಡೆಯಲಿದೆ.
ಶುಕ್ರವಾರ ರಾತ್ರಿ ಬೆಳಗಾವಿಯಲ್ಲಿ ನಡೆದ ಕೋರ್ ಕಮೀಟಿ ಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಡು ಪ್ರಬಲಗೊಳಿಸಲು ಕಾರ್ಯಕಾರಿಣಿ ಸಭೆಯಲ್ಲಿ ಸುಧೀರ್ಘ ಚರ್ಚೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.
ಜೊತೆಗೆ ಲವ್ ಜಿಹಾದ್ ಗೆ ಕಡಿವಾಣ ಹಾಕಲು ಪ್ರಬಲ ಕಾನೂನು ರಚಿಸುವಂತೆ ಸರ್ಕಾರವನ್ನು ಒತ್ತಾಯಿಸುವ ಕುರಿತು ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ಆಗಲಿದೆ ಎನ್ನುವ ಮಾಹಿತಿಯನ್ನು ಕೋರ್ ಕಮೀಟಿಯ ಸದಸ್ಯರಾಗಿರುವ ಅರವಿಂದ್ ಲಿಂಬಾವಳಿ ಮಾದ್ಯಮಗಳಿಗೆ ನೀಡೀದ್ದಾರೆ.
ಪ್ರೀತಿಸುವದು ತಪ್ಪಲ್ಲ,ಪ್ರೀತಿಸಿ ಮದುವೆ ಆಗೋದು ತಪ್ಪಲ್ಲ ಆದ್ರೆ ಪ್ರೀತಿಯ ಹೆಸರಿನಲ್ಲಿ ಮತಾಂತರ ನಡೆದಿದೆ,ಇದಕ್ಕೆ ಕಡಿವಾಣ ಹಾಕಲು ಪ್ರಬಲ ಕಾನೂನು ರಚಿಸುವಂತೆ ಸರ್ಕಾರವನ್ನು ಒತ್ತಾಯಿಸುವ ಚರ್ಚೆ ಕೂಡಾ ಇಂದು ಬೆಳಗಾವಿಯ ಗಾಂಧಿ ಭವನದಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಯಲ್ಲಿ ಆಗಲಿದೆ.
ಒಟ್ಟಾರೆ ಬೆಳಗಾವಿಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಲವ್ ಜಿಹಾದ್ ಪ್ರತಿಧ್ವನಿಸಲಿವೆ.