Breaking News
Home / Breaking News / ಕೋರೆ ಮನೆಯಲ್ಲಿ ಬಿಜೆಪಿ ಕೋರ್ ಕಮೀಟಿ ಮೀಟಿಂಗ್..ಟಿಕೆಟ್ ಫಕ್ಸಿಂಗ್..!!!

ಕೋರೆ ಮನೆಯಲ್ಲಿ ಬಿಜೆಪಿ ಕೋರ್ ಕಮೀಟಿ ಮೀಟಿಂಗ್..ಟಿಕೆಟ್ ಫಕ್ಸಿಂಗ್..!!!

ಕೋರೆ ಮನೆಯಲ್ಲಿ ಬಿಜೆಪಿ ಕೋರ್ ಕಮೀಟಿ ಮೀಟಿಂಗ್..ಟಿಕೆಟ್ ಫಕ್ಸಿಂಗ್..!!!

ಬೆಳಗಾವಿ- ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ,ಕಾಂಗ್ರೆಸ.ಮತ್ತು ಜೆಡಿಎಸ್ ಪಕ್ಷದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿವೆ
ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರನ್ನು ಭೇಟಿಯಾಗಲು ಬೆಂಗಳೂರಿಗೆ ದೌಡಾಯಿಸಿದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಳಗಾವಿಗೆ ದೌಡಾಯಿಸಿ ಬೆಳಗಾವಿಯ ಬಿಜೆಪಿ ನಾಯಕರನ್ನು ಸೆಟಲ್ ಮಾಡುತ್ತಿದ್ದಾರೆ
ಬೆಳಗಾವಿ ಉತ್ತರದಲ್ಲಿ ಬಿಜೆಪಿ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು ಎಲ್ಲ ಆಕಾಂಕ್ಷಿಗಳಲ್ಲಿ ಒಮ್ಮತ ಮೂಡಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ
ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಪ್ರಭಾಕರ ಕೋರೆ ಅವರ ನಿವಾಸದಲ್ಲಿ ಯಡಿಯೂರಪ್ಪ ಅವರು ಬೆಳಗಾವಿ ಬಿಜೆಪಿ ಮಹಾನಗರದ ಕೋರ್ ಕಮೀಟಿ ಸಭೆ ನಡೆಸಲಿದ್ದು ಈ ಸಭೆಯಲ್ಲಿ ಪ್ರಭಾಕರ ಕೋರೆ ಸಂಸದ ಸುರೇಶ ಅಂಗಡಿ.ಹಾಗು ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಪಾಲ್ಗೊಳ್ಳುತ್ತಿದ್ದಾರೆ
ಈ ಸಭೆಯಲ್ಲಿ ಬೆಳಗಾವಿ ಉತ್ತರ ಬಿಜೆಪಿ ಆಕಾಂಕ್ಷಿಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿದ್ದು ಉತ್ತರ,ದಕ್ಷಿಣ,ಗ್ರಾಮೀಣ ಕ್ಷೇತ್ರದ ಬಿಜೆಪಿಯ ಸ್ಥಿತಿ ಗತಿಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ
ಬೆಳಗಾವಿ ಉತ್ತರದ ಆಕಾಂಕ್ಷಿಗಳು ತಮಗೆ ಟಿಕೆಟ್ ನೀಡುವಂತೆ ಯಡಿಯೂರಪ್ಪ ನವರ ದುಂಬಾಲು ಬಿದ್ದಿರುವ ಕಾರಣ ಯಡಿಯೂರಪ್ಪ ಕೋರ್ ಕಮೀಟಿ ಸಭೆ ನಡೆಸಿ ಉತ್ತರದಲ್ಲಿ ಯಾರ ಪ್ರಾಬಲ್ಯ ಎಷ್ಟಿದೆ ಎನ್ನುವದರ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಕೋರೆ ಸಾಹೇಬರ ಮನೆಯಲ್ಲಿ ಮೀಟಿಂಗ್ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *