ಬೆಳಗಾವಿ- ರಾಜ್ಯದಲ್ಲಿ ಉಪ ಚುನಾವಣೆ ಪಕ್ಕದ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂಧರ್ಭದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಪ್ರಕರಣಗಳು ಪ್ರತಿಭಟನೆಗಳಿಗೆ ಆಹಾರವಾಗಿವೆ.ಬೆಳಗಾವಿಯ ತಹಶೀಲ್ದಾರ್ ಕಚೇರಿಯ ತಹಶೀಲ್ದಾರ್ ಅವರ ಚೇಂಬರ್ ನಲ್ಲೇ ಕ್ಲಾರ್ಕ್ ನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ.
ಸರಕಾರಿ ನೌಕರನ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ ಇಂದು ಗುರುವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ. ಜಿಲ್ಲಾಧಿಕಾರಿಗಳು ಮತ್ತು ನಗರ ಪೊಲೀಸ್ ಆಯುಕ್ತರಿಗೆ ತನಿಖೆ ಮಾಡಲು ಮತ್ತು ತಪ್ಪಿಸ್ಥ ರಿಗೆ ಶಿಕ್ಷೆ ನೀಡುವಂತೆ ಬೃಹತ್ ಪ್ರತಿಭಟನೆ ಮೂಲಕ ತೆರಳಿ ಮನವಿ ಸಲ್ಲಿಸಲಿದೆ.
ಬೆಳಗಾವಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ವಿಧಾನಸಭಾ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಪಿ. ರಾಜೀವ್ ರವರು,ಶಾಸಕರು, ಸಂಸದರು,ಜಿಲ್ಲಾಧ್ಯಕ್ಷರುಗಳು ಪಕ್ಷದ ಎಲ್ಲ ಪದಾಧಿಕಾರಿಗಳು ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.