ಬೆಳಗಾವಿ- ಮುಖ್ಯಮಂತ್ರಿ ಕುಮಾರಸ್ವಾಮಿ ರೈತ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಪ್ರತಿಭಟಿಸಿದರು
ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರ್ಯಾಲಿ ಹೊರಡಿಸಿದ ಕಾರ್ಯಕರ್ತೆಯರು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯೆಕ್ತಪಡಿಸಿದರು
ಸಿಎಂ ಕುಮಾರಸ್ವಾಮಿ ರೈತ ಮಹಿಳೆಯನ್ನು ಎಲ್ಲಿ ಮಲಗಿದ್ದಿ ? ಅಂತ ಪ್ರಶ್ನೆ ಮಾಡಿ ರೈತರನ್ನು ಗೂಂಡಾಗಳೆಂದು ಕರೆದು ಮಹಿಳಾ ಸಮಾಜಕ್ಕೆ ಮತ್ತು ರೈತ ಸಮುದಾಯಕ್ಕೆ ಅವಮಾನ ಮಾಡಿದ್ದು ಕೂಡಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಕ್ಷಮೆಯಾಚಿಸ ಬೆಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು
ಉಜ್ವಲಾ ಬಡವನ್ನಾಚೆ ಜ್ಯೋತಿ ಭಾವಿಕಟ್ಟಿ ಸೇರಿಂತೆ ಹಲವಾರು ಜನ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ