ಶರತ್ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ

 

ಬೆಳಗಾವಿ- ಮಂಗಳೂರಿನ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಖಂಡಿಸಿ ಬೆಳಗಾವಿಯ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು
ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ಹೊರಡಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದ್ರು
ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಅವರ ಹತ್ಯೆಗೈದ ಆರೋಪಿಗಳನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು
ರಾಜ್ಯದಲ್ಲಿ ಪಿಎಎಫ್ ಐ ಮತ್ತು ಕೆಎಫ್ ಡಿ ಸಂಘಟನೆಗಳು ಮಾರಕವಾಗುತ್ತಿವೆ ರಾಜ್ಯದಲ್ಲಿ ಶಾಂತಿ ಕದಡುತ್ತಿರುವ ಇಂತಹ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಒತ್ತಾಯ ಮಾಡಿದರು
ಡಿ ರೂಪಾ ಅವರು ಪ್ರಾಮಾಣಿಕವಾಗಿ ಸೇವೆ ಮಾಡಿ ಜೈಲಿನ ಆಕ್ರಮ ಚಟುವಟಿಕೆಗಳನ್ನು ಬಯಲು ಮಾಡಿ ದಿಟ್ಟತನ ತೋರಿಸಿದ್ದಾರೆ ಇಂತಹ ಪ್ರಮಾಣಿಕ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡುತ್ತಿರುವದು ಖಂಡನೀಯ ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು
ನಗರ ಜಿಲ್ಲಾಧ್ಯಕ್ಷ ರಾಜೇಂದ್ರ ಹರಕುಣಿ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು

Check Also

ಉತ್ತರಾಖಂಡದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಜಸ್ಟ್ ಮಿಸ್….!!!

ಬೆಳಗಾವಿ- ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ನಿ ಸಮೇತ ಡೆಹ್ರಾಡೂನ್ ಗೆ ಹೋಗಿದ್ರು, ಅಲ್ಲಿ ಮೀಟೀಂಗ್ ಮುಗಿಸಿ ಒಟ್ಟು ಎಂಟು …

Leave a Reply

Your email address will not be published. Required fields are marked *