Breaking News
Home / ಬೆಳಗಾವಿ ನಗರ / ಬಿಜೆಪಿ ನಾಯಕನ ಹತ್ಯೆ ಖಂಡಿಸಿ ಪ್ರತಿಭಟನೆ

ಬಿಜೆಪಿ ನಾಯಕನ ಹತ್ಯೆ ಖಂಡಿಸಿ ಪ್ರತಿಭಟನೆ

ಬೆಳಗಾವಿ:
ಬಿಜೆಪಿ ಕಾರ್ಯದರ್ಶಿ ಹಾಗೂ ಆರ್.ಎಸ್.ಎಸ್. ಕಾರ್ಯಕರ್ತ ರುದ್ರೇಶ ದುಷ್ಕರ್ಮಿಗಳಿಂದಾದ ಕಗ್ಗೊಲೆ ಖಂಡಿಸಿ ಬೆಳಗಾವಿ ಉತ್ತರ ಹಾಗೂ ಗ್ರಾಮಾಂತರ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ಜಿಲ್ಲಾಧಿಕಾರಿಗೆ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಚನ್ನಮ್ಮ ವೃತ್ತದಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡು ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಿದರು.
ಬೆಂಗಳೂರು ಶಿವಾಜಿ ನಗರದ ಆರ್‍ಬಿಎನ್‍ಎಮ್‍ಎಸ್ ಕ್ರೀಡಾಂಗಣದಲ್ಲಿ ರುದ್ರೇಶ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರ ಹತ್ಯೆ ಮಾಡಿದ್ದಾರೆ. ಹಾಗೂ ಅ.8. ರಂದು ಇದೇ ರೀತಿ ಘಟನೆ ಆರ್‍ಎಸ್‍ಎಸ್‍ನ ಸೇವಕ ದೀಲಿಪ ಮೇಲೆ ಬೆಂಗಳೂರಿನ ಮುತ್ಯಾಲ ನಗರದಲ್ಲಿ ನಡೆದಿತ್ತು. ಈ ಪ್ರಕರಣ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು. ಆರೋಪಿಗಳನ್ನು ಬಂಧಿಸಿ, ಕೆಲವೇ ಕ್ಷಣಗಳಲ್ಲಿ ಬಿಡುಗಡೆಗೊಳಿಸಲಾಗಿದೆ. ಇಲ್ಲಿಯವರೆಗೂ ಇನ್ನುಳಿದ 6 ದುಷ್ಕರ್ಮಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.
ಅದೇ ರೀತಿ ಆರ್. ಎಸ್.ಎಸ್‍ನ ಸೇವಕ ಪ್ರಣೀಂದ್ರ ಅವರ ಮೇಲೆ ವಿದ್ಯಾರಣ್ಯಪುರದಲ್ಲಿ ದುಷ್ಕರ್ಮಿಗಳಿಂದ ಹಲ್ಲೆ ನಡೆಸಲಾಗಿತ್ತು. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ.
ಇಂತಹ ಹಲ್ಲೆಗಳು ಆರ್‍ಎಸ್‍ಎಸ್ ಸೇವಕರ ಮೇಲಿಂದ ಮೇಲೆ ನಡೆಯತ್ತಿದ್ದರು. ಸರಕಾರವು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಆರೋಪಿಗಳನ್ನು ಕೂಡಲೇ ಬಂಧಿಸಿಬೇಕೆಂದು ಬಿಜೆಪಿ ಯುವಮೋರ್ಚಾ ಆಗ್ರಹಿಸಿದರು.
ಕಿರಣ ಜಾಧವ್, ರಾಜು ಟೋಪಣ್ಣವರ, ರಾಜು ಚಿಕ್ಕನಗೌಡರ, ಲೀನಾ ಟೋಪಣ್ಣವರ ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *