Breaking News

ರೈತರ ಸಾಲ ಮನ್ನಾ ಮಾಡಲು ಬಿಜೆಪಿ ಒತ್ತಾಯ

 

ಬೆಳಗಾವಿ- ರಾಜ್ಯದಲ್ಲಿ ಭೀಕರ ಬರಗಾಲದ ಛಾಯೆ ಆವರಿಸಿ ರೈತ ಸಮುದಾಯ ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ನಗರ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದ ರು
ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜೇಂದ್ರ ಹರಕುಣಿ ಮ ಅವರ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಅಭಯ ಪಾಟೀಕ ಶಂಕರಗೌಡ ಪಾಟೀಲ ಕಿರಣ ಜಾಧವ ರಾಜು ಚಿಕ್ಕನಗೌಡ್ರ.ಎಂ ಬಿ ಝಿರಲಿ,ಬಾಬುಲಾಲ ರಾಜಪುರೋಹಿತ,ರಾಜು ಟೋಪಣ್ಣವರ ಲೀಣಾ ಟೋಪಣ್ಣವರ ಸೇರಿದಂತೆ ಬಿಜೆಪಿ ನಾಯಕರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿದರು

ಈ ಸಂಧರ್ಭದಲ್ಲಿ ಮಾತನಾಡಿದ ನಗರ ಬಿಜೆಪಿ ಅಧ್ಯಕ್ಷ ರಾಜೇಂದ್ರ ಹರಕುಣಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಜವಾಬ್ದಾರಿ ಹೊರಿಸದೇ ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಬೇಕು ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಬೇಕು ಕೂಡಲೇ ರೈತರಿಗೆ ಬೆಳೆ ಪರಿಹಾರ ಕೊಡಬೇಕು ದನಕರುಗಳಿಗೆ ಮೇವು ನೀರು ಒದಗಿಸಬೇಕು ಜೊತಗೆ ಜಿಲ್ಲೆಯಲ್ಲಿ ಯುದ್ದೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ನಡೆಸಬೇಕು ಎಂದು ರಾಜೇಂದ್ರ ಹರಕುಣಿ ಒತ್ತಾಯ ಮಾಡಿದರು

Check Also

ಮೀಸಲಾತಿಗಾಗಿ ಹೆಬ್ಬಾಳಕರ್ ಮನೆಯಲ್ಲಿ ಆಗ್ರಹ ಪತ್ರ…

ಬೆಳಗಾವಿ ಕೂಡಲಸಂಗಮ ಮಹಾಪೀಠದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತ್ರತ್ವದಲ್ಲಿ ನಡೆಯುತ್ತಿರುವ ಶಾಸಕರುಗಳ ಮನೆಯಲ್ಲಿ ಪಂಚಮಸಾಲಿ …

Leave a Reply

Your email address will not be published. Required fields are marked *