ಬೆಳಗಾವಿ-ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ,ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮೂಗು ತೂರಿಸುತ್ತಿದೆ.ಮಹಾರಾಷ್ಟ್ರದಿಂದ ಕರ್ನಾಟಕ ಗಡಿಭಾಗದ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ ವಿಚಾರವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಂಭೀರವಾಗಿ ಪರಗಣಿಸಿದೆ.
ಉಚಿತ ಶಿಕ್ಷಣ ಆಫರ್ ನೀಡಿರುವ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯ,ಬೆಳಗಾವಿ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದೆ.ಕರ್ನಾಟಕ ಗಡಿಭಾಗದ 865 ಗ್ರಾಮಗಳ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತೇವೆ ಎಂದು ಮಹಾರಾಷ್ಟ್ರದ ವಿಶ್ವವಿದ್ಯಾಲಯ ಘೋಷಣೆ ಮಾಡಿರುವದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಮಹಾರಾಷ್ಟ್ರ ಸರ್ಕಾರದ ಕ್ರಮಕ್ಕೆ ಕರ್ನಾಟಕ ಗಡಿ ಪ್ರಾಧಿಕಾರ ಅಧ್ಯಕ್ಷರು ಖಂಡಿಸಿದ್ದುಮಹಾರಾಷ್ಟ್ರ ಕುತಂತ್ರಕ್ಕೆ ಗಡಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್ ನಾಗಾಭರಣ ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ನಾಗಾಭರಣ ಪತ್ರ ಬರೆದು ಸರ್ಕಾರದ ಗಮನ ಸೆಳೆದಿದ್ದಾರೆ.
ಉಚಿತ ಶಿಕ್ಷಣ ನೀಡಿ ಗಡಿ ಭಾಗದ ಗ್ರಾಮಗಳು ನಮಗೆ ಸೇರಿದ್ದು ಎಂದು ಮಹಾರಾಷ್ಟ್ರ ಸರ್ಕಾರ ಬಿಂಬಿಸುವ ಯತ್ನ ನಡೆಸಿದೆ.ಈ ವಿಷಯವನ್ನು ಗಡಿ ಅಭಿವೃದ್ಧಿ ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಿದೆ,ಕರ್ನಾಟಕ ಸರ್ಕಾರ ಗಡಿ ಭಾಗದ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಹೆಚ್ಚಿಸಬೇಕು,ಹೆಚ್ಚಿನ ವಿದ್ಯಾರ್ಥಿಗಳನ್ನು ಶಾಲೆಗೆ ಆಕರ್ಷಿಸಬೇಕು,ಈ ಸಂಬಂಧ ಗಡಿ ಭಾಗದ ಕನ್ನಡ ಪರ ಸಂಘಟನೆ ಪ್ರಾಧಿಕಾರದ ಸಭೆ ಕರೆಯಬೇಕು,ಅಲ್ಲದೇ ಜಿಲ್ಲಾಧಿಕಾರಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕೆಂದು ಸಿಎಂ ಗೆ ಬರೆದ ಪತ್ರದಲ್ಲಿ ಮನವಿ ಮಾಡಿಕೊಳ್ಖಲಾಗಿದೆ.