Breaking News

ಬೆಳಗಾವಿ ಗಡಿವಿವಾದ: ರಾಘ ಬದಲಿಸಿದ ಮಹಾರಾಷ್ಟ್ರ ಸಿಎಂ…!!

*ಮತ್ತೆ ಹೊಸ ವರಸೆ ಶುರು ಮಾಡಿದ ಮಹಾರಾಷ್ಟ್ರ ಸಿಎಂ; ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಯಲಿ ಎಂದ ಏಕನಾಥ ಶಿಂಧೆ..!*

ಬೆಳಗಾವಿ: ಗಡಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ತಾನೇ ಧಾವೆ ಹೂಡಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಮತ್ತೆ ಹೊಸ ವರಸೆ ಶುರು ಮಾಡಿದ್ದು ಮಾತುಕತೆ ಮೂಲಕ ಬಗೆಹರಿಯಬೇಕು ಎಂದು ವಾದ ಮಂಡಿಸುತ್ತಿದೆ.ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವಾಗಿದೆ ಎಂದು ಹೇಳಿದ್ದಾರೆ.

ಗಡಿವಿವಾದ ಕುರಿತು ನಾವು ಈಗಾಗಲೇ ಸಭೆ ನಡೆಸಿದ್ದೇವೆ. ಈ ಹಳೆಯ ವಾದವೇನಿದೆ ಅದು ನ್ಯಾಯಾಲಯದ ಮುಂದಿದೆ.ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ.ಆದ್ರೆ ಇದರ ಜೊತೆಗೆ ಈ ವಿಷಯ ಮಾತುಕತೆ ಮೂಲಕ ಬಗೆಹರಿಯಬೇಕು.ಇದು ಮಹಾರಾಷ್ಟ್ರ ಸರ್ಕಾರದ ನಿಲುವಾಗಿದೆ.ಎರಡೂ ರಾಜ್ಯಗಳ ರಾಜ್ಯಪಾಲರ ಸಭೆಯಾಗಿದೆ.ಕೇಂದ್ರ ಸರ್ಕಾರ ಸಹ ಸಕಾರಾತ್ಮಕ ನಿಲುವು ವ್ಯಕ್ತಪಡಿಸಬೇಕಿದೆ.ಈ ವಿವಾದ ಸರ್ವ ಸಮ್ಮತಿ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವಾಗಿದೆ. ಈ ನಿಟ್ಟಿನಲ್ಲಿ ನಾವು ಸಭೆಯನ್ನು ಸಹ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಯೋಜನೆಯ ಲಾಭ ಗಡಿಭಾಗದ ಮರಾಠಿಗರಿಗೆ ಸಿಗುತ್ತಿತ್ತೋ ಅದನ್ನ ಹೆಚ್ಚಿಸಿದ್ದೇವೆ.ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿ ಹತ್ತು ಸಾವಿರ ರೂಪಾಯಿ 20ಸಾವಿರಕ್ಕೆ ಹೆಚ್ಚಳವಾಗಿದೆ.ಮುಖ್ಯಮಂತ್ರಿ ಧರ್ಮಾದಾಯ ಸಹಾಯ ನಿಧಿ ಯೋಜನೆಯ ಲಾಭ ಬಂದ್ ಆಗಿತ್ತು ಅದನ್ನ ಶುರು ಮಾಡಿದ್ದೇವೆ. ಗಡಿಭಾಗದ ಮರಾಠಿಗರಿಗೆ ಆರೋಗ್ಯ ಸೌಲಭ್ಯ ನೀಡಲು ಮಹಾತ್ಮ ಜ್ಯೋತಿಬಾ ಪುಲೆ ಯೋಜನೆ ನೀಡಲು ನಿರ್ಣಯ ತೆಗೆದುಕೊಳ್ಳಲಾಗಿದೆ.

ಗಡಿ ಭಾಗದ ಮರಾಠಿಗರಿಗೆ ಮಹಾರಾಷ್ಟ್ರ ಸರ್ಕಾರದಿಂದ ಸಿಗುವ ಯೋಜನೆಗಳ ಲಾಭ ಹೆಚ್ಚಿಸಿದ್ದೇವೆ.ಈ ವಿಷಯ ಮಾತುಕತೆ ಮೂಲಕ ಬಗೆಹರಿಯಬೇಕು ಎಂಬುದು ನಮ್ಮ ನಿಲುವು.ಮತ್ಯಾರೋ ವಾದ ಸೃಷ್ಟಿಸಿ ಮತ್ತಷ್ಟು ಜಟಿಲಗೊಳಿಸಬಾರದು.ನಾವು ಸಭೆ ನಡೆಸಿದಾಗ ಸಾಕಷ್ಟು ಸಲಹೆಗಳು ಬಂದಿವೆ ಎಂದರು.

Check Also

ಬೆಳಗಾವಿಯಲ್ಲಿ ಅತ್ಯಾಚಾರಕ್ಕೆ ಯತ್ನ ಆರೋಪಿಗೆ, ಥಳಿತ…!!

ಬೆಳಗಾವಿ -ಬುದ್ಧಿಮಾಂದ್ಯೆ ಯುವತಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿಯ ಕಾಕತಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ …

Leave a Reply

Your email address will not be published. Required fields are marked *