ಳಗಾವಿ- ಪದೇಪದೇ ಗಡಿ ಕ್ಯಾತೆ ತಗೆಯುತ್ತಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬೆಳಗಾವಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯೆಕ್ತಪಡಿಸಿವೆ.
ಉದ್ಧವ್ ಠಾಕ್ರೆ ಶವಯಾತ್ರೆ ಮಾಡುವ ಮೂಲಕ ಕನ್ನಡಪರ ಸಂಘಟನೆಗಳ ಆಕ್ರೋಶ ವ್ಯೆಕ್ತಪಡಿಸಿ,ಕನ್ನಡ ಸಾಹಿತ್ಯ ಭವನದಿಂದ ಚೆನ್ನಮ್ಮ ವೃತ್ತಕ್ಕೆ ಉದ್ಧವ ಠಾಕ್ರೆ ಪ್ರತಿಕೃತಿ ತಂದು ಶವಯಾತ್ರೆ ಮಾಡಿದ್ದಾರೆ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಸಚಿವ ಏಕನಾಥ ಶಿಂಧೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕ್ಷಮೆಯಾಚಿಸಬೇಕು, ಪದೇಪದೇ ಗಡಿವಿವಾದ ಕೆಣಕುತ್ತಿರುವ ಮಹಾರಾಷ್ಟ್ರ ಸಿಎಂ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಉದ್ಧವ್ ಠಾಕ್ರೆ ಶವಯಾತ್ರೆ ಮಾಡಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಘೋಷಣೆ ಕೂಗಿ ಉದ್ಧವ ಠಾಖ್ರೆ ಭಾವ ಚಿತ್ರಗಳನ್ನು ರಸ್ತೆಯ ಮೇಲೆ ಎಸೆದು ಚಪ್ಪಲಿ ಸೇವೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಉದ್ಧವ್ ಠಾಕ್ರೆಗೆ ಎಚ್ಚರಿಕೆ ನೀಡುವಂತೆ ಆಗ್ರಹಪಡಿಸಿದ್ದಾರೆ.
ಕರವೇ,ನಾರಾಯಣ ಗೌಡರ ಬಣ,ಶಿವರಾಮೇಗೌಡರ ಬಣ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ, ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಖಡೇಬಜಾರ್ ಠಾಣೆ ಸಿಪಿಐ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದೆ, ಸ್ಥಳದಲ್ಲೇ ಒಂದು ಕೆಎಸ್‌ಆರ್‌ಪಿ ತುಕಡಿ ಮೊಕ್ಕಾಂ ಹೂಡಿದೆ.
*ಗಡಿ ತಗಾದೆ ; ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆ.*
ಬೆಳಗಾವಿ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ.
ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ ಕೆರಳಿಸುವ ಯತ್ನ ಮಾಡುವುದನ್ನು ನಿಲ್ಲಿಸಬೇಕು.
ರಾಜ್ಯದ ಒಂದಿಂಚೂ ಜಾಗ ಬಿಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿಯ ಉದ್ಧಟತನದ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಕನ್ನಡ ನಾಡಿನ ನೆಲ,ಜಲ ಮತ್ತು ಭಾಷೆಯ ರಕ್ಷಣೆಗೆ ನಾವು ಕಟಿಬದ್ಧರಾಗಿದ್ದೇವೆ. ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿ ನಡೆದುಕೊಂಡರೇ ಪ್ರತ್ಯುತ್ತರ ನೀಡಲು ನಾವೂ ಸಿದ್ಧ.
– *ಶ್ರೀ ರಮೇಶ್ ಜಾರಕಿಹೊಳಿ,* ಜಲಸಂಪನ್ಮೂಲ ಸಚಿವರು
ಕರ್ನಾಟಕ ಸರ್ಕಾರ.