ಬೆಳಗಾವಿ
ಗಡಿ ವಿಷಯ ಸುಪ್ರೀಂಕೋರ್ಟ್ ನಲ್ಲಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆ ವಿಭಜನೆ ಮಾಡುವುದು ಸೂಕ್ತವಲ್ಲ ಎಂದು ಕನ್ನಡ ಪರ ಹೋರಾಟಗಾರ ಅಶೋಕ ಚಂದರಗಿ ಆಗ್ರಹಿಸಿದರು.
ಅವರು ಶನಿವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ಈಗಾಗಲೇ ಗಡಿ ವಿಷಯ ಸುಪ್ರೀಂಕೋರ್ಟ್ ನಲ್ಲಿ ಇದೆ. ಅದು ಇತ್ಯರ್ಥವಾಗುವವರೆಗೂ ಜಿಲ್ಲಾ ವಿಭಜನೆ ಮಾಡುವುದು ಸರಿಯಲ್ಲ. ಈಗಾಗಲೇ ಕನ್ನಡ ಹೋರಾಟಗಾರರು ಎರಡು ಬಾರಿ ಸಿಎಂಗೆ ನಿಯೋಗ ತೆರಳಿ ಜಿಲ್ಲಾ ವಿಭಜನೆ ಮಾಡಬಾರದು ಎಂದು ಒತ್ತಾಯಿಸಿದ್ದೇವೆ. ಆದರೂ ಕೆಲ ರಾಜಕಾರಣಿಗಳು ತಮ್ಮ ಪ್ರತಿಷ್ಠೆಯ ಸಲುವಾಗಿ ಜಿಲ್ಲಾ ವಿಭಜನೆ ಮಾಡುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಮಹಾಪೌರ ಸಿದ್ದನಗೌಡ ಪಾಟೀಲ, ಕನ್ನಡಪರ ಹೋರಾಟಗಾರರಾದ ದೀಪಕ ಗುಡಗನಟ್ಟಿ, ಬಾಬು ಸಂಗೋಡಿ, ಮಹಾದೇವ ತಳವಾರ ಸೇರಿದಂತೆ ಮೊದಲಾದವರು ಹಾಜರಿದ್ದರು.
