ಬೆಳಗಾವಿ:ಸಿಎಂ ಯಡಿಯೂರಪ್ಪ ಸೋಮವಾರ ವಿಧಾನಸೌಧದಲ್ಲಿ ಮಂಡಿಸಿರುವ ೨೦೨೧-೨೨ನೇ ಸಾಲಿನ ಮುಂಗಡ ಪತ್ರ ಗಡಿ ನಾಡು ಬೆಳಗಾವಿ ಜನತೆಯ ನಿರೀಕ್ಷೆ ಹುಸಿಗೊಳಿಸಿದೆ.
ಬೆಳಗಾವಿಗೆ ಎರಡನೇ ರಾಜಧಾನಿ ಸ್ಥಾನಮಾನ ಮಾನ ನೀಡುವುದು, ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ, ಚಿಕ್ಕೋಡಿ ಮತ್ತು ಗೋಕಾಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿಸಬೇಕು. ಸುವರ್ಣವಿಧಾನಸೌಧಕ್ಕೆ ರಾಜ್ಯಮಟ್ಟದ ಪ್ರಮುಖ ಕಚೇರಿಗಳನ್ನು ಸ್ಥಳಾಂತರಿಸುವುದು, ಬೆಳಗಾವಿ ನಗರದಲ್ಲಿ ಪ್ಲೈಓವರ್ ನಿರ್ಮಿಸುವುದು, ಬೆಳಗಾವಿಯಲ್ಲಿ ಅದ್ಧೂರಿಯಾಗಿ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವಕ್ಕೆ ೧ ಕೋಟಿ ರೂಪಾಯಿ ಅನುದಾನ ನೀಡಬೇಕು. ಸುವರ್ಣವಿಧಾನಸೌಧದ ಎದುರು ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಚನ್ನಮ್ಮನ ಬಲಗೈ ಬಂಟ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣಗೊಳಿಸುವುದು ಸೇರಿದಂತೆ ಮತ್ತಿತರ ಈ ಭಾಗದ ಬೇಡಿಕೆಗಳಿಗೆ ರಾಜ್ಯಸರ್ಕಾರ ಸ್ಪಂದಿಸಿಲ್ಲ
. ರಾಜ್ಯ ಬಜೆಟ್ ಬಗ್ಗೆ ಬೆಟ್ಟದ್ದಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದ ಜಿಲ್ಲೆಯ ಜನತೆಗೆ ನಿರಾಸೆ ಮೂಡಿಸಿದೆ.
ಬೆಳಗಾವಿ ನಗರದಲ್ಲಿ ವರ್ತುಲ ರಸ್ತೆ ನಿರ್ಮಾಣ, ರಾಜ್ಯ ಸರ್ಕಾರದಿಂದ ಭೂಸ್ವಾಧೀನ ವೆಚ್ಚದ ಶೇ. ೫೦ ರಷ್ಟು ಮೊತ್ತದ ೧೪೦ ಕೋಟಿ ರೂಪಾಯಿ ಅನುದಾನ ಕಾಯ್ದಿರಿಸಲಾಗಿದೆ. ವರ್ತುಲ ರಸ್ತೆ ಬಹುದಿನಗಳ ಬೇಡಿಕೆಯಾಗಿದ್ದು, ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಪ್ರಯತ್ನದ ಫಲವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಾರಿಯಬಜೆಟ್‌ನಲ್ಲಿ ವರ್ತುಲ ರಸ್ತೆ ನಿರ್ಮಾಣದ ಘೋಷಣೆ ಮಾಡಿದ್ದಲ್ಲದೇ, ಅನುದಾನವನ್ನು ಕಾಯ್ದಿರಿಸಿದ್ದಾರೆ.
ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ಕನಸಿನಕೂಸು ಧಾರವಾಡ- ಕಿತ್ತೂರು- ಬೆಳಗಾವಿ ನಡುವೆ ೭೩ ಕಿ.ಮೀ ಉದ್ದದ ಹೊಸ ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರದಿಂದ ೪೬೩ ಕೋಟಿ ರೂಪಾಯಿ ಅನುದಾನ ಕಾಯ್ದಿರಿಸಲಾಗಿದೆ. ಅದರಂತೆ ಉತ್ತರ ಕರ್ನಾಟಕ ಭಾಗದ ಜನತೆಯ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನೀರಾವರಿ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಆದ್ಯತೆ ನೀಡಲಾಗಿದೆ. ನಿಪ್ಪಾಣಿಯಲ್ಲಿ ಕೊಲ್ಲಾಪುರಿ ಪಾದರಕ್ಷೆಗಳ ಕ್ಲಸ್ಟರ್ ಸ್ಥಾಪನೆ ಘೋಷಣೆ ಮಾಡಲಾಗಿದೆ. ಕಿತ್ತೂರಿನ ಕೋಟೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಪ್ರವಾಸಿ ಸೌಲಭ್ಯಗಳಿಗಾಗಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ೫೦ ಕೋಟಿ ಅನುದಾನ ಕಾಯ್ದಿರಿಸಲಾಗಿದ