ಬೆಳಗಾವಿ- ಮುಂಬರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪಕ್ಷದ ಚಿಹ್ನೆ ಆಧಾರಿತ ಚುನಾವಣೆ ಎದುರಿಸಲಿದೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮೀಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದರು.
ಬೆಳಗಾವಿಯ ಮರಾಠಾ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲಾ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮುಂದಿನ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸಿಂಬಾಲ್ ಮೇಲೆ ಸ್ಪರ್ದೆ ಮಾಡುತ್ತೇವೆ.ಮುಂದಿನ ಮಹಾಪೌರ ಕೂಡಾ ಬಿಜೆಪಿ ಪಕ್ಷದವರೇ ಆಗ್ತಾರೆ ಎಂದು ಅಭಯ ಪಾಟೀಲ ವಿಶ್ವಾಸ ವ್ಯೆಕ್ತ ಪಡಿಸಿದರು.
ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮಾತನಾಡಿ ಬೆಳಗಾವಿ ಜಿಲ್ಲೆಯಿಂದ ಯಾವ ಪಕ್ಚದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುತ್ತಾರೆಯೋ ಆ ಪಕ್ಷ ಅಧಿಕಾರಕ್ಕೆ ಬರುತ್ತದೆ.ಬೆಂಗಳೂರಿನ ನಂತರ ಬೆಳಗಾವಿ ಜಿಲ್ಲೆ ರಾಜಕೀಯವಾಗಿ ಬಲಾಡ್ಯವಾಗುತ್ತಿದೆ,ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲೆಯಿಂದ ಹದಿನೆಂಟು ಕ್ಷೇತ್ರಗಳಿಂದ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ ಎನ್ನುವ ವಿಶ್ವಾಸ ವ್ಯೆಕ್ತಪಡಿಸಿದರು
ವಿಧಾನ ಪರಿಚತ್ತಿನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ ಮೊದಲ ಬಾರಿಗೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಅಸ್ತಿತ್ವಕ್ಕೆ ಬಂದಿದೆ ಅಭಿವೃದ್ಧಿಯ ಮೂಲಕ ಇದರ ಸದುಪಯೋಗ ಪಡೆದುಕೊಂಡು ಮುಂದಿನ ಗ್ರಾಮ ಪಂಚಾಯತಿ,ಜಿಪಂ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪಕ್ಷವನ್ನು ಸಂಘಟನೆ ಮಾಡೋಣ ಎಂದು ಕವಟಗಿಮಠ ಹೇಳಿದರು.