ಬೆಳಗಾವಿ ದೊಡ್ಡ ಜಿಲ್ಲೆಗೆ,ಕೈ ಕೊಟ್ಟ ಕಾಂಗ್ರೆಸ್ ಸರ್ಕಾರ…!!
ಬೆಳಗಾವಿ- ಅಂತೂ ಇಂತೂ 44 ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಮಾಡಿ ನಿನ್ನೆ ರಾತ್ರಿ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿ ಪಟ್ಟಿ ಬಿಡುಗಡೆ ಮಾಡಿದ್ದು 44 ಜನರ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಗೆ ಸಿಕ್ಕಿದ್ದು ಶೂನ್ಯ….
ಮುಖ್ಯಂತ್ರಿ ಸಿದ್ರಾಮಯ್ಯ ಸಹಿ ಮಾಡಿರುವ 44 ಜನರ. ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯ ಯಾರಿಗೂ ಯಾವುದೇ ಸ್ಥಾನ ಸಿಕ್ಕಿಲ್ಲ,ಭೌಗೋಳಿಕವಾಗಿ 15 ತಾಲ್ಲೂಕು,18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬಲಾಡ್ಯ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಶ್ರಮಿಕರಿಗೆ,ಕಾರ್ಯಕರ್ತರಿಗೆ ಕಾಂಗ್ರೆಸ್ ಸರ್ಕಾರ ಕೊಟ್ಟಿದ್ದು ಬಿಗ್ ಶಾಕ್, ನಿನ್ನೆ ಬಿಡುಗಡೆಯಾದ ಪಟ್ಟಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ.
ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಆಂತರಿಕ ತಿಕ್ಕಾಟ,ಗುದ್ದಾಟದಿಂದ ಬೆಳಗಾವಿಯ ಬುಡಾ, ಮತ್ತು ಕಾಡಾ ಎರಡನ್ನೂ ಘೋಷಣೆ ಮಾಡದೇ ಬಾಕಿ ಉಳಿಸಿಕೊಳ್ಳಲಾಗಿದ್ದು ಬೆಳಗಾವಿ ಕಾಂಗ್ರೆಸ್ ತಿಕ್ಕಾಟ ಇನ್ನೂ ಜೀವಂತವಾಗಿದೆ ಎನ್ನುವದು ಇದರಿಂದ ಸಾಭೀತಾಗಿದೆ. ಸರ್ಕಾರ ಬಿಡುಗಡೆ ಮಾಡಿರುವ ಪಟ್ಟಿ ನೋಡಿದ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ನಾಯಕರು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದು, ಬಲಾಡ್ಯ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಡಾ.ಕಾಡಾ ಅಧ್ಯಕ್ಷರ ನೇಮಕದ ವಿಚಾರದಲ್ಲಿ ತಿಕ್ಕಾಟ ಮುಂದುವರೆದ ಹಿನ್ನಲೆಯಲ್ಲಿ ಎರಡನ್ನೂ ಪೆಂಡೀಂಗ್ ಇಡಲಾಗಿದೆ. ಜಿಲ್ಲೆಯ ತಿಕ್ಕಾಟಕ್ಕೆ ಕೊನೆ ಎಂದು ಎನ್ನುವ ಪ್ರಶ್ನೆ ಈಗ ಬೆಳಗಾವಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಡುತ್ತಿದೆ. ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ರಾಜ್ಯದ ಕಾಂಗ್ರೆಸ್ ನಾಯಕರು ಬೆಳಗಾವಿ ಜಿಲ್ಲೆಗೆ ಅನ್ಯಾಯ ಮಾಡಿದ್ದು ಈ ಅಸಮಾಧಾನ ಯಾವ ರೀತಿ ಸ್ಪೋಟಗೊಳ್ಳುತ್ತದೆ ಎನ್ನುವದನ್ನು ಕಾದು ನೋಡಬೇಕಾಗಿದೆ.