ಕೈ…ಮೇಲುಗೈ..ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ ಜೈ.ಜೈ.

ಬೆಳಗಾವಿ- ಗುಂಡ್ಲು ಪೇಟೆ ಮತ್ತು ನಂಜನಗೂಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ವಿಜಯ ಸಾಧಿಸಿದ ಹಿನ್ನಲೆಯಲ್ಲಿ ಬೆಳಗಾವಿಯ ಕಾಂಗ್ರೆಸ್ ಕಾರ್ಯಕರ್ತರು ಲಕ್ಷ್ಮೀ ಹೆಬ್ಬಾಳಕರ ಅವರ ನೇತ್ರತ್ವದಲ್ಲಿ ವಿಜಯೋತ್ಸವ ಆಚರಿಸಿದರು

ನಗರದ ಚನ್ನಮ್ಮ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ ಎಂದು ಘೋಷಣೆ ಕೂಗುವದರ ಮೂಲಕ ಸಂಬ್ರಮಿಸಿದರು
ಈ ಸಂಧರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಮೆಚ್ಚಿ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರ ಜನಪರ ಯೋಜನೆಗಳು ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಜಯ ದೊರಕಿಸಿಕೊಟ್ಟಿದ್ದು ಇದು ನಂಜನಗೂಡು ಮತ್ತು ಗುಂಡ್ಲುಪೇಟೆಯ ಜನರ ವಿಜಯವಾಗಿದೆ ಎಂದು ಹೆಬ್ಬಾಳಕರ ಹೇಳಿದ್ದಾರೆ

ರಾಜ್ಯದಲ್ಲಿ ನಡೆದ ಉಪ ಚುನಾವಣೆಯ ಫಲಿತಾಂಶ ಮುಂದಿನ ವಿಧಾನ ಸಭೆ ಚುನಾವಣೆಗೆ ದಿಕ್ಸೂಚಿಯಾಗಿದ್ದು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ ಬಹುಮತ ಸಾಧಿಸಲಿದೆ ಎಂದು ಹೆಬ್ಬಾಳಕರ ವಿಶ್ವಾಸ ವ್ಯೆಕ್ತ ಪಡಿಸಿದರು

ವಿನಯ ನಾವಲಗಟ್ಟಿ ಸುನೀಲ ಹನಮಣ್ಣವರ ರಾಜಾ ಸಲೀಂ ಕಾಶಿಮನವರ ಮೋಹನ ರೆಡ್ಡಿ ಚನ್ನರಾಜ ಹಟ್ಟಿಹೊಳಿ ಯುವರಾಜ ಕದಂ ಅಶ್ಪಾಕ ತಹಶೀಲ್ದಾರ ಬಸವರಾಜ ಶೇಗಾವಿ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವದಲ್ಲಿ ಭಾಗ ವಹಿದ್ದರು

 

 

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *