ಬೆಳಗಾವಿ-_ ಕೇಂದ್ರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ…
ದೇಶದಲ್ಲಿ ನೋಟ್ ಬ್ಯಾನ್ ಹಾಗೂ ಪ್ರಧಾನಿ ವಿರುದ್ಧ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.
ನಗರದ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ದೇಶದಲ್ಲಿ 500,1000 ರೂಪಾಯಿ ಮುಖ ಬೆಲೆಯ ನೋಟ್ ನಿಷೇಧದಿಂದ ಬಡವರು, ಮಧ್ಯಮ ವರ್ಗದ ಜನರಿಗೆ ಭಾರೀ ಪರಿಣಾಮ ಬೀರಿದೆ. ಇನ್ನೂ ಪ್ರಧಾನಿ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ಸ್ವತಂತ್ರ ಸಂಸ್ಥೆಯೊಂದು ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ರು
. ಇನ್ನೂ ಪ್ರತಿಭಟನೆ ನಂತರ ಮಾತನಾಡಿ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಧಾನಿ ನರೇಂದ್ರ ಮೋದಿ ಏಪಕ್ಷೀಕಯ ನಿರ್ಧಾರದಿಂದ ದೇಶದ ಜನರಿಗೆ ಭಾರಿ ತೊಂದರೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಇಂದು ಇಡೀ ರಾಜ್ಯದಲ್ಲಿ ಪ್ರತಿಭಟನೆ ನಡೆಸಿ 5 ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ಆಗ್ರಹಿಸಿದ್ರು..
ಶನಿವಾರ ನಡೆದ ಪ್ರತಿಭಟನೆಯಲ್ಲಿ ಶಾಸಕ ಫಿರೋಜ್ ಸೇಠ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ,ರಾಜು ಸೇಠ ಕಿರಣ ರೆಡ್ಡಿ ಸೇರಿದಂತೆ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು