Breaking News
Home / Breaking News / ಬೆಳಗಾವಿ ಜಿಲ್ಲೆ ಪಾಲಿಗೆ ಮತ್ತೇ ಗುಡ್ ನ್ಯುಸ್… ಐದು ಪ್ರಕರಣಗಳ ವರದಿ ಮತ್ತೇ ನೆಗೆಟಿವ್-

ಬೆಳಗಾವಿ ಜಿಲ್ಲೆ ಪಾಲಿಗೆ ಮತ್ತೇ ಗುಡ್ ನ್ಯುಸ್… ಐದು ಪ್ರಕರಣಗಳ ವರದಿ ಮತ್ತೇ ನೆಗೆಟಿವ್-

ಬೆಳಗಾವಿ ಜಿಲ್ಲೆ: ಮತ್ತೇ ಐದು ಪ್ರಕರಣಗಳ ವರದಿ ನೆಗೆಟಿವ್- ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

ಬೆಳಗಾವಿ, ಮಾ.೩೦(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಒಟ್ಟು ಎಂಟು ಮಾದರಿಗಳ ಪೈಕಿ ಐದು ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಂಟು ಮಾದರಿಗಳ ಪೈಕಿ ಇನ್ನು ಮೂರು ಮಾದರಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟಾರೆ ೨೧ ಮಾದರಿಗಳ ಪೈಕಿ ಇದೀಗ ಒಟ್ಟಾರೆ ೧೮ ನೆಗೆಟಿವ್ ಬಂದಿರುತ್ತವೆ.

ಜನರು ವದಂತಿಗಳಿಗೆ ಕಿವಿಗೊಡದೇ ಸರ್ಕಾರದ ಸೂಚನೆ ಮೇರೆಗೆ ಎಲ್ಲ ರೀತಿಯ ಮುನ್ನೆಚ್ವರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.
***

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *