ಬೆಳಗಾವಿ, ಮಾ.೨೫(ಕರ್ನಾಟಕ ವಾರ್ತೆ) ನಗರ ಮತ್ತು ಜಿಲ್ಲೆಯ ವಿವಿಧೆಡೆ ದಿನಸಿ ಅಂಗಡಿ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ನಿರ್ದಿಷ್ಟ ಅಂತರದ ಗುರುತು ಮಾಡಲಾಗುತ್ತಿದೆ.
ಸಾಮಗ್ರಿಗಳನ್ನು ಖರೀದಿಸಲು ಆಗಮಿಸುವ ಗ್ರಾಹಕರು ಪರಸ್ಪರ ಅಂತರ ಕಾಯ್ದುಕೊಳ್ಳಲು ಇದರಿಂದ ಅನುಕೂಲವಾಗಲಿದೆ.
ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್.ಅವರ ನೇತ್ರತ್ವದಲ್ಲಿ ಮಾರ್ಕಿಂಗ್ ಕೆಲಸ ನಡೆದಿದೆ.
ಇದೇ ರೀತಿ ಎಲ್ಲ ತಾಲ್ಲೂಕು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾರ್ಕಿಂಗ್ ಮಾಡುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
***
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ