Breaking News

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಸೊಂಕಿತರ ಗುಣಮುಖ,ಇಂದು ಡಿಸ್ಚಾರ್ಜ್…

ಕೋವಿಡ್-೧೯: ಮತ್ತೇ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಕೋವಿಡ್-೧೯ ಸೋಂಕು ತಗುಲಿದ್ದ ಇಬ್ಬರು ವ್ಯಕ್ತಿಗಳು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ೨೦ ವರ್ಷದ ಯುವಕ(ಪಿ-೧೨೮) ಹಾಗೂ ರಾಯಬಾಗ ತಾಲ್ಲೂಕು ಕುಡಚಿಯ ೪೦ ವರ್ಷದ ವ್ಯಕ್ತಿ (ಪಿ-೧೪೮)ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.

ಈ ಇಬ್ಬರೂ ಏಪ್ರಿಲ್ ೧ ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 42 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಈ ಪೈಕಿ ಬೆಳಗುಂದಿ ಗ್ರಾಮದವರಾದ ಪಿ-೧೨೬ ಅವರನ್ನು ಈಗಾಗಲೇ ಸರ್ಕಾರದ ಮಾರ್ಗಸೂಚಿಯ ಅನುಸಾರ ಅವರನ್ನು ಏ‌.೧೮ ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿರುತ್ತದೆ. ಇಲ್ಲಿಯವರೆಗೆ ಒಟ್ಟಾರೆ ಮೂರು ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
***

Check Also

ಶಿಕ್ಷಣ ಕ್ಷೇತ್ರಕ್ಕೆ 1500 ಕೋಟಿ ದೇಣಿಗೆ ನೀಡಿದ ಅಜೀಂ ಪ್ರೇಮಜೀ….

“ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ” ಲೋಗೋ ಅನಾವರಣ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ ಸಹಕಾರಿ: ಸಚಿವ ಮಧು ಬಂಗಾರಪ್ಪ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.