ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು ನಾಲ್ಕು ಜನರು ಸಾವನ್ನಪ್ಪಿದ ಘಟನೆ ನಡೆದಿದೆ.
ಕರ್ತವ್ಯ ಮುಗಿಸಿ ಮನೆಗೆ ಹೋಗುತ್ತಿದ್ದ KSRP ಪೇದೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ
ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಪೇದೆಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಪೇದೆ ಹಾಲ್ಲಪ್ಪ ಚಂಡಕಿ (48) ಮೃತ ಪಟ್ಟಿದ್ದಾರೆ. ಮತ್ತೋರ್ವ ಪೇದೆ ದತ್ತು ಪಾಟೀಲ್ ಗೆ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಟ್ಟಿ ಗ್ರಾಮದ ಮನೆಗೆ ಈ ಇಬ್ಬರು ಪೇದೆಗಳು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಟ್ರ್ಯಾಕ್ಟರ್ ಪಲ್ಟಿ,ಓರ್ವನ ಸಾವು
ಹೊಲಕ್ಕೆ ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ,ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಸಮೀಪದ ಅಂಬೇವಾಡಿ ಗ್ರಾಮದ ಬಳಿ ನಡೆದಿದೆ.
ಮೃತ ವ್ಯೆಕ್ತಿಯನ್ನು ಸಾಗರ ಅರ್ಜುನ್ ಅತಿವಾಡಕರ (35) ಎಂದು ಗುರುತಿಸಲಾಗಿದೆ,ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಬ್ಬರು ಮಕ್ಜಳ ಸಾವು
ಆಟವಾಡುತ್ತ ಕೃಷಿ ಹೊಂಡಕ್ಕೆ ಬಿದ್ದ ಇಬ್ಬರು ಮಕ್ಕಳು ಸಾವನ್ನೊಪ್ಪಿದ ಘಟನೆ ರಾಮದುರ್ಗ ತಾಲ್ಲೂಕಿನ ಕಟಕೋಳ ಗ್ರಾಮದಲ್ಲಿ ನಡೆದಿದೆ.
ಸತೀಶ್ ದುರ್ಗಣ್ಣವರ (8),ಮತ್ರು ಸಂಚಿತಾ ದುರ್ಗಣ್ಣವರ (6) ಎಂದು ಗುರುತಿಸಲಾಗಿದೆ.ಕೃಷಿ ಹೊಂಡಕ್ಕೆ ಒಟ್ಟು ನಾಲ್ಕು ಜನ ಮಕ್ಕಳು ಬಿದ್ದಿದ್ದರು,ಅದರಲ್ಲಿ ಇಬ್ಬರು ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಪಾಲಿಕೆ ಅಧಿಕಾರಿಗಳ ದಾಳಿ
ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಅಂಗಡಿಗಳ ಮೇಲೆ ದಾಳಿ ಮಾಡಿ 70 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.