ಬೆಳಗಾವಿ-ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಎರಡೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ನಡೆದ ಅತ್ಯಾಚಾರ ಪ್ರಕರಣ ಕುರಿತು ಬೆಳಗಾವಿಯ ಯುವಕರು ತೀವ್ರ ಆಕ್ರೋಶ ವ್ಯೆಕ್ತಪಡಿಸಿದ್ದಾರೆ
ಅರೋಪಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿರುವ ವಿಷಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಜಿಲ್ಲಾ ಆಸ್ಪತ್ರೆಯ ಬಳಿ ಜಮಾಯಿಸಿದ ಯುವಕರು ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಪಟ್ಟು ಹಿಡದಿರುವ ಹಿನ್ನಲೆಯಲ್ಲಿ ಜಿಲ್ಲಾ ಆಸ್ಪತ್ರೆಯ ಬಳಿ ಬಿಗಿ ಪೋಲೀಸ್ ಬಂದೋಬಸ್ತಿಯನ್ನು ಏರ್ಪಡಿಸಲಾಗಿದೆ
ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ದ್ವಾರದಲ್ಲಿ ಬಿಗಿ ಪೋಲೀಸ್ ಸರ್ಪಗಾವಲನ್ನು ನಿಯೋಜಿಸಲಾಗಿದ್ದು ಆಸ್ಪತ್ರೆಯಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ
ಆರೋಪಿಯನ್ನು ದಾಖಲು ಮಾಡಿರುವ ಆಸ್ಪತ್ರೆಯ ಕೊಠಡಿ ಎದುರು ಪೋಲೀಸ್ ಭದ್ರತೆ ಒದಗಿಸಲಾಗಿದೆ
ಅತ್ಯಾಚಾರಕ್ಕೊಳಗಾದ ಎರಡೂವರೆ ವರ್ಷದ ಹೆಣ್ಣು ಮಗುವಿನ ಪರಿಸ್ಥಿತಿ ಚಿಂತಾಜನಕವಾಗಿದ್ದು ಮಗುವಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಬ್ಬರು ಮಗುವಿನ ಪರಿಸ್ಥಿತಿ ನೋಡಿ ಕಣ್ಣೀರು ಸುರಿಸಿದ ಘಟನೆಯೂ ನಡೆಯಿತು
ಆಸ್ಪತ್ರೆಯ ವೈದ್ಯರು ಮಗುವಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು ಮಗುವಿನ ಪ್ರಾಣ ರಕ್ಷಣೆಗೆ ನಿರಂತರ ಪ್ರಯತ್ನ ನಡೆಸಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ