Breaking News

ವಿಡಿಯೋ,ಅಡಿಯೋ, ವೈರಲ್, ಕಿಡಗೇಡಿಗಳ ವಿರುದ್ಧ ಕ್ರಮಕ್ಕೆ ಡಿಸಿ ಸೂಚನೆ

ಬೆಳಗಾವಿ- ನಜಿಲ್ಲಾ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರ ಸಂಭಾಷಣೆ ವೈರಲ್ ಆಗಿರುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು,ಕಿಡಗೇಡಿಗಳ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವಂತೆ ನಗರ ಪೋಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಕೊರೋನಾ ಸಕಿತರ ನಡುವಳಿಕೆ ಕುರಿತು ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮತ್ತು ಅಡಿಯೋ ಕ್ಲಿಪ್ ಗಳು ವೈರಲ್ ಆಗಿದ್ದವು

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೊಂಕಿತರ ವಿಡಿಯೋ ಮತ್ತು ಅಡಿಯೋ ಮಾಡಿದ ಹೊರಗಿನ ವ್ಯೆಕ್ತಿಗಳನ್ನು ಗುರುತಿಸಿ ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳು ನಗರ ಪೋಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಆಸ್ಪಯ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಶಂಕಿತರು,ಮತ್ತು ಸೊಂಕಿತರನ್ನು ಕುಡಿಯೇ ಇರುತ್ತಿದ್ದಾರೆ,ಸೊಂಕಿತರಿಗೆ ಯಾವುದೇ ಚಿಕಿತ್ಸೆ ನೀಡುತ್ತಿಲ್ಲ,ಎನ್ನುವ ಹೇಳಿಕೆಯನ್ನು ಶೂಟ್ ಮಾಡಿ ಪೇಶಂಟ್ ಗಳ ಜೊತೆ,ಮೋಬೈಲ್ ನಲ್ಲಿ ಮಾಡಿದ ಅಡಿಯೋ ತುಣಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಸಮಾಜಕ್ಕೆ ತಪ್ಪು ಸಂದೇಶ ನೀಡಿರುವ ಕಿಡಗೇಡಿಗಳನ್ನು ಗುರುತಿಸುವ ಕಾರ್ಯವನ್ನು ಪೋಲೀಸರು ಮಾಡುತ್ತಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *