Breaking News

ಬೆಳಗಾವಿ ಆರೇಂಜ್ ಝೋನ್ ಡಿಸಿ ಡಿಕ್ಲೇರ್…

ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ

ಬೆಳಗಾವಿ, ಮೇ 3(ಕರ್ನಾಟಕ ವಾರ್ತೆ): ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ. ಆದ್ದರಿಂದ ಈ ವಲಯಕ್ಕೆ ಅನ್ವಯವಾಗುವ ಮಾರ್ಗಸೂಚಿ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಮೇ‌ 4 ರಿಂದ ಎರಡು ವಾರಗಳ ಕಾಲ ಲಾಕ್ ಡೌನ್ ಅನ್ನು ಜಾರಿಗೊಳಿಸಲಾಗುತ್ತದೆ.

ಕಿತ್ತಳೆ ವಲಯದಲ್ಲಿ ಅನುಸರಿಸಬೇಕಾದ ನಿಯಮಾವಳಿ ಪ್ರಕಾರ ಆರ್ಥಿಕ ಮತ್ತು ವಾಣಿಜ್ಯ ಚಟುವಟಿಕೆಗಳು ಮತ್ತು ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
***

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *