Breaking News
Home / Breaking News / ಬೆಡ್ ವ್ಯೆವಸ್ಥೆ ಹೆಚ್ಚಿಸಲು ಬೆಳಗಾವಿ ಡಿಸಿಯಿಂದ ಸಿಟಿ ರೌಂಡ್…..!

ಬೆಡ್ ವ್ಯೆವಸ್ಥೆ ಹೆಚ್ಚಿಸಲು ಬೆಳಗಾವಿ ಡಿಸಿಯಿಂದ ಸಿಟಿ ರೌಂಡ್…..!

ಬೆಳಗಾವಿ-ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಕಾರ್ಯಪ್ರವೃತ್ತರಾಗಿದ್ದಾರೆ.

ನಗರದ ಇ.ಎಸ್.ಐ ಆಸ್ಪತ್ರೆ, ಮಿಲಿಟರಿ ಆಸ್ಪತ್ರೆ ಹಾಗೂ ಕ್ಯಾಂಟೋನ್ಮೆಂಟ್ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಲಭ್ಯವಿರುವ ಹಾಸಿಗೆಗಳು ಹಾಗೂ ಇತರೆ ಮೂಲಸೌಕರ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸಂಬಂಧಿಸಿದ ಆಸ್ಪತ್ರೆಗಳ ಅಧಿಕಾರಿಗಳು ಮತ್ತು ವೈದ್ಯರ ಜತೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು, ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರಿಗೆ ಅಗತ್ಯವಿರುವ ಆರೈಕೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.

ವೈದ್ಯಕೀಯ ಸಿಬ್ಬಂದಿಗೆ ಪ್ರತ್ಯೇಕ ಕೇರ್ ಸೆಂಟರ್:

ಕೋವಿಡ್-೧೯ ಸಾಂಕ್ರಾಮಿಕ ರೋಗದ ವಿರುದ್ಧ ನಾಲ್ಕೈದು ತಿಂಗಳುಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ವೈದ್ಯರು, ನರ್ಸ್ ಮತ್ತಿತರ ವೈದ್ಯಕೀಯ ಸಿಬ್ಬಂದಿಗೂ ಸೋಂಕು ತಗುಲುತ್ತಿರುವುದರಿಂದ ಅವರಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಸುಮಾರು 40 ಹಾಸಿಗೆ ಸೌಲಭ್ಯ ಹೊಂದಿರುವ ನಗರದ ಕ್ಯಾಂಟೋನ್ಮೆಂಟ್ ಆಸ್ಪತ್ರೆಯನ್ನು ಸೋಂಕಿತ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಮೀಸಲಿಡಲಾಗುವುದು.

ಉಳಿದಂತೆ 25 ಹಾಸಿಗೆಗಳ ಇ.ಎಸ್.ಐ. ಮತ್ತು 50 ಹಾಸಿಗೆಗಳ ವ್ಯವಸ್ಥೆ ಹೊಂದಿರುವ ಮಿಲಿಟರಿ ಆಸ್ಪತ್ರೆಗಳನ್ನು ಇತರೆ ಸೋಂಕಿತರ ಚಿಕಿತ್ಸೆಗೆ ಒದಗಿಸಲಾಗುತ್ತದೆ.

ಮಿಲಿಟರಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ಸೋಂಕಿತರನ್ನು ಇಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನರ ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
***

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *