ಬೆಳಗಾವಿ, : ಸಕಾಲ ಯೊಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳಲ್ಲಿ ಬಹಳ ದಿನಗಳಿಂದ ಬಾಕಿ ಉಳಿಸಿಕೊಂಡಿಸಿರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಹಾಗೂ ಸಾರ್ವಜನಿಕರಲ್ಲಿ ಸಕಾಲ ಯೋಜನೆಯ ಕುರಿತು ಅರಿವು ಮೂಡಿಸುವ ಸಲುವಾಗಿ ಮೊದಲನೇ ಹಂತದಲ್ಲಿ ಕಂದಾಯ, ನಗರಾಭಿವೃದ್ಧಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಸಾರಿಗೆ ಇಲಾಖೆಗಳಲ್ಲಿ ದಿನಾಂಕ:30.11.2020 ರಿಂದ 05.12.2020ರ ವರೆಗೆ ಸಕಾಲ ಸಪ್ತಾಹವನ್ನು ಆಚರಿಸಲಾಗಿದೆ.
ವಿಲೇವಾರಿ ಮಾಡಲಾದ ಅರ್ಜಿಗಳ ಸಂಖ್ಯೆ:
ನಾಲ್ಕು ಇಲಾಖೆಗಳಲ್ಲಿ ವಿಲೇವಾರಿ ಮಾಡಲಾದ ಪ್ರಕರಣಗಳ ವಿವರ ಈ ಕೆಳಗಿನಂತಿರುತ್ತದೆ.
ಕಂದಾಯ ಇಲಾಖೆ-2975, ನಗರಾಭಿವೃದ್ಧಿ ಇಲಾಖೆ
1352, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ 7069 ಹಾಗೂ ಸಾರಿಗೆ ಇಲಾಖೆ
5061 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.
ನಾಲ್ಕು ಇಲಾಖೆಗಳಲ್ಲಿ ಒಟ್ಟಾರೆಯಾಗಿ 16457 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
***