Breaking News

ವೀರ ಮದಕರಿ ನಾಯಕರ ಪ್ರತಿಮೆ,ಸ್ಥಾಪನೆಗೆ ಕ್ರಮ

ಬೆಳಗಾವಿ-  ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಮಾ.5) ಅನುಸೂಚಿತ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳ ಅನ್ವಯ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ/ವರ್ಗಗಳ ಮೇಲಿನ ದೌರ್ಜನ್ಯ ಅಧಿನಿಯಮ ಅನ್ವಯ ದಾಖಲಾದ ಪ್ರತಿಯೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಹಾರ ಧನ ಮಂಜೂರು ಮಾಡಲಾಗಿದೆ. ಪರಿಹಾರ ನೀಡುವಲ್ಲಿ ಯಾವುದೇ ರೀತಿಯ ವಿಳಂಬ ಮಾಡುತ್ತಿಲ್ಲ ಎಂದು ತಿಳಿಸಿದರು.

ಕಳೆದ ಸಭೆಗಳಲ್ಲಿ ಚರ್ಚಿಸಿದಂತೆ ಸ್ಮಶಾನಕ್ಕೆ ಜಾಗ ನೀಡುವ ಪ್ರಕ್ರಿಯೆ ನಡೆದಿದ್ದು, ಜಮೀನು ಲಭ್ಯವಿರುವ ಕಡೆಗಳಲ್ಲಿ ಖರೀದಿ ಮಾಡಲಾಗುವುದು ಹಾಗೂ ಈಗಾಗಲೇ ಲಭ್ಯವಿರುವ ಸ್ಮಶಾನ ಭೂಮಿಯನ್ನು ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದರು.

ವೀರ ಮದಕರಿ ನಾಯಕರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ತೀರ್ಮಾನದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಗಾಯರಾಣ ಜಮೀನು ಸಕ್ರಮಕ್ಕೆ ಸರ್ಕಾರದ ಹಂತದಲ್ಲಿ ನಿರ್ಧಾರ ಮಾಡಿದಾಗ ಮಾತ್ರ ಸ್ಥಳೀಯವಾಗಿ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಕರಣಗಳ ವಿಲೇವಾರಿಗೆ ಸಮರ್ಪಕ ಕ್ರಮ ಕೈಗೊಳ್ಳಬೇಕು. ಸಂಬಂಧಿಸಿದ ಇಲಾಖೆಗಳ ವತಿಯಿಂದ ಅಗತ್ಯ ಸಿಬ್ಬಂದಿ ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಇದನ್ನು ಬಳಸಿಕೊಂಡು ಪ್ರಕರಣಗಳ ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ವಿಜಯ ತಳವಾರ ಮಾತನಾಡಿ, ರಾಜಕೀಯ ಒತ್ತಡಕ್ಕೆ ಮಣಿದು ಅಕ್ರಮವಾಗಿ ಬಂಧನದಲ್ಲಿ ಇರಿಸುವ ಪ್ರಕರಣಗಳು ಕಂಡುಬಂದಿವೆ. ಈ ಬಗ್ಗೆ ಆಯುಕ್ತರು ಗಮನಹರಿಸಿ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲು ಕೋರಿದರು.
ಕೆಲವು ಮಾರ್ಗಗಳ ನಾಮಕರಣ ಮಾಡಿದಂತೆ ನಗರದ ಒಂದು ರಸ್ತೆಗೆ ವೀರ ಮದಕರಿ ನಾಯಕರ ಹೆಸರು ನಾಮಕರಣ ಮಾಡುವಂತೆ ಒತ್ತಾಯಿಸಿದರು.

ವಿಭಾಗ ಮಟ್ಟದ ಕಾರ್ಯಾಗಾರ:

ದೌರ್ಜನ್ಯ ಅಧಿನಿಯಮ ಹಾಗೂ ಇಲಾಖೆಯ ವತಿಯಿಂದ ಲಭ್ಯವಿರುವ ಸೌಲಭ್ಯಗಳ ಕುರಿತು ಅರಿವು ಮೂಡಿಸಲು ಸುವರ್ಣ ವಿಧಾನಸೌಧದಲ್ಲಿ ಮಾ.19 ರಂದು ಬೆಳಗಾವಿ ವಿಭಾಗಮಟ್ಟದ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ದರ್ಶನ್ ಹೆಚ್.ವಿ, ಪೊಲೀಸ್ ಆಯುಕ್ತರಾದ ಡಾ.ಕೆ ತ್ಯಾಗರಾಜನ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಉಮಾ ಸಾಲಿಗೌಡರ, ಬೆಳಗಾವಿ ಉಪ ವಿಭಾಗಾಧಿಕಾರಿ ಅಶೋಕ ತೇಲಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
****

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *